ಬಿಎಸ್ ವೈ- ಅಮಿತ್ ಶಾ ಭೇಟಿ: ಕರ್ನಾಟಕದಲ್ಲಿ ಮಿಷನ್-150 ಗೆ ಯೋಜನೆ ಸಿದ್ಧತೆ
ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಸಿಬಿಐ ಕೋರ್ಟ್ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿದ ಮೇಲೆ ಮುಂಬರುವ ವಿಧಾನಸಭೆ ...

ಬೆಂಗಳೂರು: ಅಕ್ರಮ ಗಣಿಗಾರಿಕೆ ಪ್ರಕರಣ ಸಂಬಂಧ ಸಿಬಿಐ ಕೋರ್ಟ್ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿದ ಮೇಲೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಿಷನ್-150 ಇನ್ ಕರ್ನಾಟಕ ಪ್ಲ್ಯಾನ್ ಗೆ ಎಲ್ಲಾ ರೀತಿಯ ಸಿದ್ಧತೆ ನಡೆಸುತ್ತಿದ್ದಾರೆ.
ಸಿಬಿಐ ಕ್ಲೀನ್ ಚಿಟ್ ನೀಡಿದ ಎರಡು ದಿನಗಳ ನಂತರ ದೆಹಲಿಗೆ ತೆರಳಿರುವ ಯಡ್ಯೂರಪ್ಪ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ರಾಜ್ಯದ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಹಾಗೂ ಮುಂದಿನ ವಿಧಾನ ಸಭೆ ಚುನಾವಣೆಗಳ ಬಗ್ಗೆ ಅಂಕಿ ಅಂಶಗಳ ಸಮೇತ ಮಾಹಿತಿ ನೀಡಿದ್ದಾರೆ.
ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಹಣಕಾಸು ಸಚಿವ ಅರುಣ್ ಜೈಟ್ಲಿ ಅವರನ್ನು ಸಹ ಯಡಿಯೂರಪ್ಪ ಭೇಟಿ ಮಾಡಲಿದ್ದಾರೆ.
ಇತ್ತೀಚೆಗೆ ಲಿಂಗಸುಗೂರಿನಲ್ಲಿ ನಡೆದ ಎಸ್ ಟಿ ರ್ಯಾಲಿಯ ಯಶಸ್ಸಿನ ನಂತರ ನವೆಂಬರ್ 27 ರಂದು ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ ಮೆಗಾ ರ್ಯಾಲಿ ನಡೆಸಲು ಯಡಿಯೂರಪ್ಪ ಸಿದ್ಧತೆ ನಡೆಸುತ್ತಿದ್ದಾರೆ. ರ್ಯಾಲಿ ಉದ್ದೇಶಿಸಿ ಮಾತನಾಡುವಂತೆ ಅಮಿತ್ ಶಾ ಗೆ ಯಡಿಯೂರಪ್ಪ ಆಹ್ವಾನ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


