ರಾಜಕೀಯ

ಕಾವೇರಿ ಸಮಸ್ಯೆ ಪರಿಹಾರಕ್ಕಾಗಿ ಜನಾರ್ದನ ಪೂಜಾರಿ ಉರುಳು ಸೇವೆ: ಸಿಎಂ ಗೂ ಆಹ್ವಾನ

ಕಾವೇರಿ ಸಮಸ್ಯೆ ಬಗೆಹರಿಯ ಬೇಕೆಂದು ಬೇಡಿ ಗೋಕರ್ಣನಾಥ ಕ್ಷೇತ್ರದಲ್ಲಿ ಉರುಳು ಸೇವೆ ಹಮ್ಮಿಕೊಂಡಿರುವುದಾಗಿ ಕಾಂಗ್ರೆಸ್ ಹಿರಿಯ ಮುಖಂಡ ಬಿ ಜನಾರ್ದನ ...

ಕಾವೇರಿ ಸಮಸ್ಯೆ ಪರಿಹಾರಕ್ಕಾಗಿ ಜನಾರ್ದನ ಪೂಜಾರಿ ಉರುಳು ಸೇವೆ: ಸಿಎಂ ಗೂ ಆಹ್ವಾನ
ಸಿದ್ದರಾಮಯ್ಯ ಮತ್ತು ಜನಾರ್ದನ ಪೂಜಾರಿ
Published On :

ಮಂಗಳೂರು: ಕಾವೇರಿ ಸಮಸ್ಯೆ ಬಗೆಹರಿಯ ಬೇಕೆಂದು ಬೇಡಿ ಗೋಕರ್ಣನಾಥ ಕ್ಷೇತ್ರದಲ್ಲಿ ಉರುಳು ಸೇವೆ ಹಮ್ಮಿಕೊಂಡಿರುವುದಾಗಿ ಕಾಂಗ್ರೆಸ್ ಹಿರಿಯ ಮುಖಂಡ  ಬಿ ಜನಾರ್ದನ ಪೂಜಾರಿ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ಯಾವುದೇ ಅಪಾಯಕಾರಿ ಘಟನೆಗಳು ನಡೆಯಬಾರದು ಮತ್ತು ರಾಜ್ಯದ ಜನತೆಯ ಹಿತ ಕಾಪಾಡಬೇಕು ಎಂದು ಹಾರೈಸಿ ಇದೇ 18ರಂದು ಬೆಳಿಗ್ಗೆ 10.30ಕ್ಕೆ ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಉರುಳು ಸೇವೆ ಮಾಡಲಿದ್ದೇನೆ’ಈ ಉರುಳು ಸೇವೆಯಲ್ಲಿ ಸಿಎಂ ಸಿದ್ದರಾಮಯ್ಯ ನವರು ಭಾಗವಹಿಸುವ ಮೂಲಕ ಮಾದರಿಯಾಗಬೇಕೆಂದು ಅವರು ಹೇಳಿದ್ದಾರೆ.

6 ಕೋಟಿ ಜನರಿಗಾಗಿ ಉರುಳು ಸೇವೆ ಮಾಡುತ್ತಿದ್ದು, ಸಿದ್ದರಾಮಯ್ಯ ಅವರ ಒಳಿತಿಗಾಗಿಯೂ ಈ ಸೇವೆ ಮಾಡಲಿದ್ದೇನೆ ಎಂದರು. ಕಾವೇರಿ ವಿಚಾರದಲ್ಲಿ 3 ರಾಜ್ಯಗಳು ಹೊತ್ತಿ ಉರಿಯುತ್ತಿವೆ. ಈ ನಿಟ್ಟಿನಲ್ಲಿ ಯಾವುದೇ ದುರ್ಘಟನೆಗಳು ನಡೆಯದಂತೆ ದೇವರ ಮೊರೆ ಹೋಗಬೇಕಾದದ್ದು ಎಲ್ಲರ ಕರ್ತವ್ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.