ರಾಜಕೀಯ

ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಸ್ಥಿಕೆಗೆ ಆಗ್ರಹಿಸಿ 'ಕೈ'ಯಿಂದ ಸಹಿ ಸಂಗ್ರಹ ಅಭಿಯಾನ

ಪಾಕಿಸ್ತಾನ ಆಕ್ರಮಿತ ಬಲೂಚಿಸ್ತಾನದ ಸಮಸ್ಯೆಗೆ ಸ್ಪಂದಿಸುವ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಕರ್ನಾಟಕದ ಕಾವೇರಿ ಸಮಸ್ಯೆಗೆ ಏಕೆ...

ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಸ್ಥಿಕೆಗೆ ಆಗ್ರಹಿಸಿ 'ಕೈ'ಯಿಂದ ಸಹಿ ಸಂಗ್ರಹ ಅಭಿಯಾನ
ದಿನೇಶ್ ಗುಂಡೂರಾವ್
Published On :
ಬೆಂಗಳೂರು: ಪಾಕಿಸ್ತಾನ ಆಕ್ರಮಿತ ಬಲೂಚಿಸ್ತಾನದ ಸಮಸ್ಯೆಗೆ ಸ್ಪಂದಿಸುವ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಕರ್ನಾಟಕದ ಕಾವೇರಿ ಸಮಸ್ಯೆಗೆ ಏಕೆ ಸ್ಪಂದಿಸುತ್ತಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಶನಿವಾರ ಪ್ರಶ್ನಿಸಿದ್ದಾರೆ. 
ಇಂದು ನಗರದಲ್ಲಿ ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕು ಎಂದು ಆಗ್ರಹಿಸಿ ಯುವ ಕಾಂಗ್ರೆಸ್ ಹಾಗೂ ಎನ್ಎಸ್ ಯು ಐನ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ದಿನೇಶ್ ಗುಂಡೂರಾವ್ ಅವರು, ಬಲೂಚಿಸ್ತಾನ ಸಮಸ್ಯೆ ಬಗೆಹರಿಸಲಿಕ್ಕೆ ಆಗುತ್ತೆ, ಆದರೆ ಕರ್ನಾಟಕದ ಸಮಸ್ಯೆ ಬಗೆಹರಿಸಲು ಯಾಕೆ ಮನಸ್ಸಿಲ್ಲ ಎಂದು ಪ್ರಧಾನಿಯನ್ನು ಪ್ರಶ್ನಿಸಿದ್ದಾರೆ.
ಕಾವೇರಿ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಲವು ಬಾರಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಆದರೆ ಯಾವ ಪತ್ರಕ್ಕೂ ಮೋದಿ ಉತ್ತರ ಕೊಟ್ಟಿಲ್ಲ. ಹಾಗಾದರೆ ಕರ್ನಾಟಕದ ಮೇಲೆ ಮೋದಿಗೆ ಅಸಮಾಧಾನವಿದೆಯೇ ಎಂದು ಕೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.