ಕಾವೇರಿ ವಿವಾದ: ತಮಿಳುನಾಡು ಸಿಎಂ ಜಯಲಲಿತಾ ವಿರುದ್ಧ ದೇವೇಗೌಡ ವಾಗ್ದಾಳಿ
ಶತಾಯಗತಾಯ ಕಾವೇರಿ ನೀರು ಬಿಡಿಸಿಕೊಳ್ಳಬೇಕು ಎಂದು ಹಠಮಾರಿ ಧೋರಣೆ ಹೊಂದಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ...

Published On :
ಬೆಂಗಳೂರು: ಶತಾಯಗತಾಯ ಕಾವೇರಿ ನೀರು ಬಿಡಿಸಿಕೊಳ್ಳಬೇಕು ಎಂದು ಹಠಮಾರಿ ಧೋರಣೆ ಹೊಂದಿರುವ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರು ಆಸ್ಪತ್ರೆಯಲ್ಲಿ ಮಲಗಿಕೊಂಡೆ ಸುಪ್ರೀಂ ಕೋರ್ಟ್ ಗೆ ಅಭಿನಂದನೆ ಸಲ್ಲಿಸುತ್ತಾರೆ ಮತ್ತು ಅಲ್ಲಿಯೇ ಸಭೆ ನಡೆಸುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಬುಧವಾರ ವಾಗ್ದಾಳಿ ನಡೆಸಿದ್ದಾರೆ.
ತಮಿಳುನಾಡಿಗೆ ಪುನಃ 18 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಪ್ರಧಾನಿ, ನಮ್ಮ ಜಲಾಶಯಗಳಲ್ಲಿ ಕುಡಿಯಲು ಮಾತ್ರ ನೀರಿದೆ. ಮತ್ತೆ ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡಬೇಕು ಎಂದು ಆದೇಶಿಸುವುದು ಎಷ್ಟು ಸರಿ? ಸಂಕಷ್ಟ ಸ್ಥಿತಿಯಲ್ಲಿ ನೀರು ಬಿಟ್ಟರೆ ಕುಡಿಯುವ ನೀರು ಸಿಗುತ್ತಾ? ಎಂದು ಪ್ರಶ್ನಿಸಿದರು,
ಬೆಳೆ ಒಣಗುತ್ತದೆ ಎಂದು ತಮಿಳುನಾಡು ಹೇಳುವ ವಾದವನ್ನೇ ಅವರು ಒಪ್ಪುವುದಾದರೆ ನಮಗೆ ಕುಡಿಯುವ ನೀರು ಮುಖ್ಯ ಅಂತ ನಾನು ಹೇಳುವೆ. ಮೂರು ದಿನಕ್ಕೆ ಬೆಳೆ ಒಣಗಲು ಸಾಧ್ಯವೇ? ನನ್ನ 50 ವರ್ಷದ ರಾಜಕೀಯದಲ್ಲಿ ಇಂತಹ ಮಾತು ಕೇಳಿಲ್ಲ. ಯಾರನ್ನೇ ಆದರೂ ಗೋಡೆತನಕ ತಳ್ಳಬಹುದು. ಆಮೇಲೆ ಅವರೂ ತಿರುಗಿ ಬೀಳುತ್ತಾರೆ ಎಂದು ಮಾಜಿ ಪ್ರಧಾನಿ ಸುಪ್ರೀಂ ಕೋರ್ಟ್ ಗೆ ತಿರುಗೇಟು ನೀಡಿದರು.
ಇದೇ ವೇಳೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅಗೌರವ ತೋರಿಲ್ಲ. ನಮ್ಮಲಿರುವ ನೀರನ್ನು ನಾವು ಕುಡಿಯುವುದಕ್ಕೆ ಮಾತ್ರ ಬಳಕೆ ಮಾಡುತ್ತೇವೆ ಎಂದು ವಿಶೇಷ ಅಧಿವೇಶನ ಕರೆದು ನಿರ್ಣಯ ಕೈಗೊಂಡಿದೆ ಅಷ್ಟೆ ಎಂದು ದೇವೇಗೌಡರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


