ರಾಜಕೀಯ

ಉಪಚುನಾವಣೆ ಪ್ರಚಾರ: ಕೊಟ್ಟಿಗೆಯಲ್ಲಿ ವಾಸ್ತವ್ಯ ಹೂಡಿದ ಬಿಜೆಪಿ ಶಾಸಕ

ಉಪ ಚುನಾವಣೆ ಪ್ರಚಾರಕ್ಕೆ ಮೈಸೂರಿಗೆ ತೆರಳಿರುವ ರಾಜಾಜಿನಗರ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ತಮ್ಮ ಸ್ನೇಹಿತನ ದನದ ಕೊಟ್ಟಿಗೆಯಲ್ಲಿ ವಾಸ್ತವ್ಯ ಹೂಡುವ ಮೂಲಕ...

ಉಪಚುನಾವಣೆ ಪ್ರಚಾರ: ಕೊಟ್ಟಿಗೆಯಲ್ಲಿ ವಾಸ್ತವ್ಯ ಹೂಡಿದ ಬಿಜೆಪಿ ಶಾಸಕ
ಸುರೇಶ್ ಕುಮಾರ್
Published On :

ಮೈಸೂರು: ಉಪ ಚುನಾವಣೆ ಪ್ರಚಾರಕ್ಕೆ ಮೈಸೂರಿಗೆ ತೆರಳಿರುವ ರಾಜಾಜಿನಗರ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್  ತಮ್ಮ ಸ್ನೇಹಿತನ ದನದ ಕೊಟ್ಟಿಗೆಯಲ್ಲಿ ವಾಸ್ತವ್ಯ ಹೂಡುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.

ಮೈಸೂರಿನ ಅಲಂಬೂರು ಮುಂಟಿ ಗ್ರಾಮದಲ್ಲಿ ತಮ್ಮ ಸ್ನೇಹಿತ ಕಪಿಲೇಶ್ ಎಂಬುವರಿಗೆ ಸೇರಿದ ದಮದ ಕೊಟ್ಟಿಗೆಯಲ್ಲಿ  ಕಳೆದ ನಾಲ್ಕು ದಿನಗಳಿಂದ ವಾಸ್ತವ್ ಹೂಡಿದ್ದಾರೆ.

ರಾತ್ರಿ ಉಳಿದಿರುವುದು ನಾವೇ ತೀರ್ಮಾನ ಮಾಡಿ ಆರಿಸಿಕೊಂಡಿರುವ (ಯಾವುದೇ ಪಂಚತಾರಾ ಹೋಟೆಲ್ ಗೆ ಕಡಿಮೆ ಇಲ್ಲದ) ಖುಷಿ ತಂದ ಗದ್ದೆಯ ವಾತಾವರಣದಲ್ಲಿ. ಒಳ್ಳೆಯ ಗಾಳಿ ನಮ್ಮ ಪಾಲಿಗೆ ದೊರಕುತ್ತಿರುವುದು ಇನ್ನಷ್ಟು ಸಂತಸ ತಂದಿದೆ.

ರಾತ್ರಿ ಮಲಗುತ್ತಿರುವುದು ಗೆಳೆಯ ಕಪಿಲೇಶ್ ರವರ ಆಲಂಬೂರು ಮುಂಟಿ ಗ್ರಾಮದ ಗದ್ದೆಯಲ್ಲಿರುವ ದನದ ಕೊಟ್ಟಿಗೆಯಲ್ಲಿ. ಸ್ನಾನಕ್ಕೆ ಗದ್ದೆಯ ಬೋರ್ ವೆಲ್ ನೀರು.

ಬೆಳಿಗ್ಗೆಯಿಂದ ಓಡಾಡಿ ಸುಸ್ತಾಗುವ ದೇಹಕ್ಕೆ ಅತ್ಯಂತ ಸುಖಕರ ನಿದ್ದೆಯನ್ನು ದಯಪಾಲಿಸಿರುವ ಈ ವಾತಾವರಣಕ್ಕೆ ಧನ್ಯೋಸ್ಮಿ ಎಂದು ಸುರೇಶ್ ಕುಮಾರ್ ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.