ರಾಜಕೀಯ

ಉಪಚುನಾವಣೆ ಅಂತಿಮ ಹಂತದ ಪ್ರಚಾರ: ಗೆಲ್ಲುವ ವಿಶ್ವಾಸದಲ್ಲಿ ಸಿಎಂ ಸಿದ್ದರಾಮಯ್ಯ

ನಂಜನಗೂಡು, ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣೆ ಪ್ರಚಾರ ಅಂತಿಮ ಹಂತಕ್ಕೆ ತಲುಪಿದ್ದು, ಮತದಾನಕ್ಕೆ ಕೇವಲ ಒಂದು ದಿನ ಮಾತ್ರ ಬಾಕಿ ಇದೆ. ಉಪ ...

ಉಪಚುನಾವಣೆ ಅಂತಿಮ ಹಂತದ ಪ್ರಚಾರ: ಗೆಲ್ಲುವ ವಿಶ್ವಾಸದಲ್ಲಿ ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ
Published On :
ನಂಜನಗೂಡು: ನಂಜನಗೂಡು, ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣೆ ಪ್ರಚಾರ ಅಂತಿಮ ಹಂತಕ್ಕೆ ತಲುಪಿದ್ದು, ಮತದಾನಕ್ಕೆ ಕೇವಲ ಒಂದು ದಿನ ಮಾತ್ರ ಬಾಕಿ ಇದೆ. ಉಪ ಚುನಾವಣೆ ಫಲಿತಾಂಶ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಆದರೂ ಸಿಎಂ ಸಿದ್ದರಾಮಯ್ಯ  ಹತಾಶರಾಗಿರುವಂತೆ ತೋರುತ್ತಿದೆ. ಉಪ ಚುನಾವಣೆ ಫಲಿತಾಂಶ 2018ರ ವಿಧಾನಸಭೆ ಚುನಾವಣೆಯ ದಿಕ್ಸೂಚಿ ಎಂಬಂತೆ ಬಿಂಬಿತವಾಗಿದ್ದು ಕಾಂಗ್ರೆಸ್ ನಲ್ಲಿ ತಮ್ಮ ನಾಯಕತ್ವವನ್ನು ಮತ್ತಷ್ಟು ಬಿಗಿಗೊಳಿಸಲು ಸಿದ್ದರಾಮಯ್ಯಗೆ ಇರುವ ಅವಕಾಶ ಇದಾಗಿದೆ. 
ಕಳೆದ 8 ದಿನಗಳಿಂದ ತಮ್ಮ ಪೂರ್ಣ ಸಮಯವನ್ನು ಉಪ ಚುನಾವಣೆ ಪ್ರಚಾರಕ್ಕಾಗಿ ಮೀಸಲಿಟ್ಟಿರುವ ಸಿಎಂ ಸಿದ್ದರಾಮಯ್ಯ ಸಭೆ ಸಮಾರಂಭಗಳಲ್ಲಿ ಭಾಗಿಯಾಗಿದ್ದಾರೆ, ದಿನಕ್ಕೆ 20 ಗ್ರಾಮಗಳಿಗೆ ತೆರಳಿ ಅಲ್ಲಿ ರೋಡ್ ಶೋ ಮತ್ತು ಚುನಾವಣಾ ರ್ಯಾಲಿಗಳಲ್ಲಿ ಭಾಗಿಯಾಗುತ್ತಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ತುರ್ತಾಗಿರುವ ಕಡತ ವಿಲೇವಾರಿಯನ್ನು ಮಾಡುತ್ತಿದ್ದಾರೆ.
ಈ ಎರಡು ಉಪಚುನಾವಣೆ ಕ್ಷೇತ್ರಗಳಲ್ಲಿ ಪ್ರಾಬಲ್ಯವಿರುವ  ಲಿಂಗಾಯತ ಮತ್ತು ದಲಿತ ಸಮುದಗಾಯ ನೀಡುತ್ತಿರುವ ಬೆಂಬಲದಿಂದಾಗಿ ಶ್ರೀನಿವಾಸ್ ಪ್ರಸಾದ್ ಮತ್ತು ಯಡಿಯೂರಪ್ಪ ಖುಷಿ ಪಡುತ್ತಿದ್ದಾರೆ. 
ಬಿಜೆಪಿ ನಾಯಕರು ಜಾತಿಯನ್ನು ಪ್ರಧಾನವಾಗಿರಿಸಿಕೊಂಡು ಪ್ರಚಾರ ಮಾಡುತ್ತಿದ್ದಾರೆ, ಸಿದ್ದರಾಮಯ್ಯ ಸಂಪುಟದಿಂದ ಶ್ರೀನಿವಾಸ್ ಪ್ರಸಾದ್ ರನ್ನು ಕೈಬಿಟ್ಟು  ದಲಿತರಿಗೆ ನೋವುಂಟು ಮಾಡಿದ್ದಾರೆ ಎಂಬ ವಿಚಾರವನ್ನು ಪದೇ ಪದೇ ಬಿಜೆಪಿ ನೆನಪಿಸುತ್ತಿದೆ. ಈ ವಿಚಾರ ಕಾಂಗ್ರೆಸ್ ಮೇಲೆ ಹೆಚ್ಚಿನ ಪರಿಣಾಮ ಬೀರಲಿದ್ದು ದೇಶದ ಪುರಾತನ ಪಕ್ಷವಾದ ಕಾಂಗ್ರೆಸ್ ಗೆಲುವು ಸಿದ್ದರಾಮಯ್ಯ ಅವರ ಮೇಲೆ ನಿಂತಿದೆ.
ಬರ ಪರಿಹಾರ ಹಾಗೂ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಜನರ ಮುಂದೆ ಇರಿಸಿ ಕಾಂಗ್ರೆಸ್ ನಾಯಕರು ಮತ ಯಾಚಿಸುತ್ತಿದ್ದಾರೆ. ಮೋದಿ ಅವರ ಚುನಾವಣಾ ಕಾರ್ಯತಂತ್ರವನ್ನು ಕಾಂಗ್ರೆಸ್ ಬಳಸುತ್ತಿದೆ, ಎರಡು ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಸಿಎಂ ಸಿದ್ದರಾಮಯ್ಯನವರನ್ನು ಕರೆತರಲಾಗಿದೆ., 
ಗುರುವಾರ ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ನಂಜನಗೂಡಿನ ಹಲವು ಗ್ರಾಮಗಳಲ್ಲಿ ರೋಡ್ ಶೋ ನಡೆಸಿ ಮತಯಾಚಿಸಿದರು, ಇನ್ನೂ ಎರಡು ಕ್ಷೇತ್ರಗಳಲ್ಲಿರುವ ಮಾರುಕಟ್ಟೆ, ಬಸ್ ನಿಲ್ದಾಣ, ಹಾಗೂ ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ಸಿದ್ದರಾಮಯ್ಯ ಅವರ ಅಭಿವೃದ್ಧಿ ಕಾರ್ಯಗಳ ಬಗ್ಗೆ ತಯಾರಿಸಿರುವ 16 ನಿಮಿಷದ ವಿಡಿಯೋವನ್ನು ಪ್ರದರ್ಶಿಸಲಾಗುತ್ತಿದೆ.
ದಲಿತ-ಲಿಂಗಾಯತ ಕಾಂಬಿನೇಷನ್ ಮುರಿದು ಹಾಕಲು ಕಾಂಗ್ರೆಸ್ ತಂತ್ರಗಾರಿಕೆ ರೂಪಿಸುತ್ತಿದೆ. ಎಂರಡು ಸಮುದಾಗಳ ಮತಗಳನ್ನು ಒಡೆಯಲು ಪ್ರಯತ್ನ ನಡೆಸುತ್ತಿದೆ. ಮತದಾರರು ಸಿದ್ದರಾಮಯ್ಯ ಅವರನ್ನು ಬೆಂಬಲಿಸುತ್ತಿದ್ದಾರೆ. ರಾಜ್ಯ ಸರ್ಕಾರದ ಜನ ಹಿತ ಕಾರ್ಯಗಳ ಬಗ್ಗೆ ಮೆಚ್ಚುಗೆಯಿದ್ದು ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸುತ್ತಾರೆ ಎಂದು ಕಾಂಗ್ರೆಸ್ ಬೆಂಬಲಿಗ ದುಗಾದ್ ರಾಜೇಗೌಡ ಅಭಿಪ್ರಾಯ ಪಟ್ಟಿದ್ದಾರೆ.
ಲಿಂಗಾಯತರು ಬಿಜೆಪಿಗೆ ಬೆಂಬಲ ನೀಡುತ್ತಾರೆ, ಉಳಿದ ಅಲ್ಪಸಂಖ್ಯಾತ ಸಮುದಾಯ ಜನರು ಮತ್ತು ಕುರುಬ ಸಮುದಾಯ ಕಾಂಗ್ರೆಸ್ ಮತ ಹಾಕುತ್ತಾರೆ, ಮತದಾರರಿಗೆ ಬಿಜೆಪಿ ಮೇಲೆ ನಂಬಿಕೆಯಿಲ್ಲ ಎಂದು ಕೆಪಿಸಿಸಿ ಕಾರ್ಯದರ್ಶಷಿ ಕಡೂರ್ ಸಿ ನಂಜಪ್ಪ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.