ರಾಜಕೀಯ

ಗುಂಡ್ಲುಪೇಟೆ: ಕಾರಿನಲ್ಲಿ 20ಲಕ್ಷ ರು. ನಗದು ಪತ್ತೆ, ಸಚಿವ ವಿನಯ್ ಕುಲಕರ್ಣಿ ಬೆಂಬಲಿಗ ವಶಕ್ಕೆ

ಏಪ್ರಿಲ್ 9ರಂದು ನಡೆಯಲಿರುವ ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಶುಕ್ರವಾರ ಸಂಜೆ ತೆರೆ ಬೀಳುತ್ತಿದ್ದು, ಇದೀಗ ರಾಜಕೀಯ....

ಗುಂಡ್ಲುಪೇಟೆ: ಕಾರಿನಲ್ಲಿ 20ಲಕ್ಷ ರು. ನಗದು ಪತ್ತೆ, ಸಚಿವ ವಿನಯ್ ಕುಲಕರ್ಣಿ ಬೆಂಬಲಿಗ ವಶಕ್ಕೆ
ಕಾರಿನಲ್ಲಿ ಪತ್ತೆಯಾದ ಹಣ
Published On :
ಚಾಮರಾಜನಗರ: ಏಪ್ರಿಲ್ 9ರಂದು ನಡೆಯಲಿರುವ ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಶುಕ್ರವಾರ ಸಂಜೆ ತೆರೆ ಬೀಳುತ್ತಿದ್ದು, ಇದೀಗ ರಾಜಕೀಯ ಪಕ್ಷದ ನಾಯಕರು ಹಣ ಹಂಚಿಕೆಗೆ ಮುಂದಾಗಿರುವುದು ಕಂಡುಬಂದಿದೆ. 
ಇಂದು ಬೆಳಗ್ಗೆ ಗುಂಡ್ಲುಪೇಟೆಯ ಖಾಸಗಿ ಹೋಟೆಲ್‌ ಮುಂಭಾಗ ನಿಲ್ಲಿಸಿದ್ದ ಹುಬ್ಬಳ್ಳಿಯ ವಾಯವ್ಯ ಸಾರಿಗೆ ನಿಗಮದ ನಾಮ ನಿರ್ದೇಶಕ ಮನೋಜ್‌ಕುಮಾರ್ ಕರ್ಜಗಿ ಅವರ ಕಾರಿನಲ್ಲಿ ದಾಖಲೆ ಇಲ್ಲದ 20 ಲಕ್ಷ ರುಪಾಯಿ ನಗದು ಪತ್ತೆಯಾಗಿದ್ದು, ಪೊಲೀಸರು ಹಣ ಹಾಗೂ ಕರ್ಜಗಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕರ್ಜಗಿ ಅವರ ಬಳಿ 2,000 ರುಪಾಯಿ ಮುಖಬೆಲೆಯ ನೋಟಿನ 10 ಕಂತೆಗಳು ಸಿಕ್ಕಿದ್ದು, ಈತ ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವ ವಿನಯ್‌ ಕುಲಕರ್ಣಿ ಅವರ ಕಟ್ಟಾ ಬೆಂಬಲಿಗ ಎನ್ನಲಾಗಿದೆ.
ಬಿಜೆಪಿ ಕಾರ್ಯಕರ್ತರು ಅನುಮಾನಗೊಂಡು ಕಾರು ತಡೆದು ತಪಾಸಣೆ ನಡೆಸಿದಾಗ ಹಣ ಇರುವುದು ಪತ್ತೆಯಾಗಿದೆ. ಕೂಡಲೇ, ಪೊಲೀಸರು ಮತ್ತು ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮನೋಜ್‌ಕುಮಾರ್ ಕರ್ಜಗಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.