ಸಂಸದ ಪ್ರತಾಪ್ ಸಿಂಹ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ವಾರ್
ನಂಜನಗೂಡು, ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣೆ ಫಲಿತಾಂಶ ಮೈಸೂರು -ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಮತ್ತು ಮಾಹಿತಿ ಮತ್ತು ತಂತ್ರಜ್ಞಾನ ..

Published On :
ಬೆಂಗಳೂರು: ನಂಜನಗೂಡು, ಗುಂಡ್ಲುಪೇಟೆ ವಿಧಾನಸಭೆ ಉಪ ಚುನಾವಣೆ ಫಲಿತಾಂಶ ಮೈಸೂರು -ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಮತ್ತು ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ಟ್ವೀಟ್ ವಾರ್ ಗೆ ಎಡೆ ಮಾಡಿಕೊಟ್ಟಿದೆ.
ನಂಜನಗೂಡು ಮತ್ತು ಗುಂಡ್ಲುಪೇಟೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷವನ್ನು ಅಭಿನಂದಿಸಲೆಂದು ಪ್ರಿಯಾಂಕ್ ಖರ್ಗೆ ಹಾಕಿದ ಟ್ವಿಟರ್ ಹೇಳಿಕೆ ಇಬ್ಬರ ಮಧ್ಯೆ ಕೆಸರೆರಚಾಟಕ್ಕೆ ವೇದಿಕೆ ಕಲ್ಪಿಸಿದೆ.
ಉಪಚುನಾವಣೆ ಫಲಿತಾಂಶ ಚರ್ಚೆಯ ಸಂದರ್ಭದಲ್ಲಿ ಪ್ರತಾಪ್ ಸಿಂಹ ಅವರನ್ನು ಪ್ರಿಯಾಂಕ್ ಖರ್ಗೆ ಪೇಪರ್ ಸಿಂಹ ಎಂದು ಟೀಕಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಪ್ರತಾಪ್ ಸಿಂಹ, ನಿಮ್ಮ ಪ್ರಿಯಾಂಕ ಹೆಸರೇ ನೀವು ನೆಹರೂ ಕುಟುಂಬದ ಗುಲಾಮರು ಎಂಬುದರ ಸಂಕೇತ ಎಂದು ಲೇವಡಿ ಮಾಡಿದ್ದಾರೆ.
ನಿಮ್ಮ ತಂದೆ ಬಿಟ್ಟುಕೊಟ್ಟ ಕ್ಷೇತ್ರದಲ್ಲಿ ಚುನಾವಣೆಗೆ ನಿಂತು ಸೋತಿದ್ದನ್ನು ನೀವೊಮ್ಮೆ ನೆನಪಿಸಿಕೊಳ್ಳಿ ಎಂದು ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ. ಅದಕ್ಕೆ ಪ್ರಿಯಾಂಕ್ ಖರ್ಗೆ, ಸೋಲು ಮತ್ತು ರಾಜಕೀಯ ನನಗೆ ಬಹಳಷ್ಟು ಪಾಠ ಕಲಿಸಿದೆ. ಅದರಲ್ಲಿ ನಮ್ರತೆಯೂ ಒಂದು ಎಂದು ಉತ್ತರಿಸಿದ್ದಾರೆ. ಬಳಿಕ ಇಬ್ಬರೂ ಸುಮ್ಮನಾಗಿದ್ದಾರೆ. ಆದರೆ, ಈ ಟ್ವಿಟರ್ ಸಮರವನ್ನು ಅವರ ಬೆಂಬಲಿಗರು ಮುಂದುವರೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಪ್ರಿಯಾಂಕ್ ಖರ್ಗೆPratap Simhaಪ್ರತಾಪ್ ಸಿಂಹPriyank Kharge. Tweet WarBypoll resultsಟ್ವೀಟ್ ವಾರ್ಉಪಚುನಾವಣೆ ಫಲಿತಾಂಶ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


