ರಾಜಕೀಯ

2018 ವಿಧಾನಸಭೆ ಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಸ್ಪರ್ಧೆ

2018ರ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಜನತಾ ದಳ(ಜೆಡಿಎಸ್) 224 ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ.

2018 ವಿಧಾನಸಭೆ ಚುನಾವಣೆ: ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಸ್ಪರ್ಧೆ
ಎಚ್ ಡಿ ಕುಮಾರಸ್ವಾಮಿ
Published On :
ಬೆಂಗಳೂರು: 2018ರ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಜನತಾ ದಳ(ಜೆಡಿಎಸ್) 224 ಕ್ಷೇತ್ರಗಳಲ್ಲೂ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ. 
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲೂ ಬೂತ್ ಮಟ್ಟದಲ್ಲಿ ಸಮಿತಿ ರಚನೆ, ಪಕ್ಷದ ಪದಾಧಿಕಾರಿಗಳ ಅಮೂಲಾಗ್ರ ಬದಲಾವಣೆ, ಪಕ್ಷದ ಸರ್ಕರಾದ ಅವಧಿಯಲ್ಲಿನ ಸಾಧನೆಗಳ ಪ್ರಚಾರಕ್ಕೆ ಸಮಿತಿ ರಚನೆ ಮಾಡಲು ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. 
ಜೆಡಿಎಸ್ ನ 100 ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಸಿದ್ಧಗೊಂಡಿದ್ದು ಈ ಪಟ್ಟಿಯನ್ನು ಅಂತಿಮ ಪರಿಶೀಲನೆಗೆ ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಕಳುಹಿಸಲಾಗಿದ್ದು ಮೇನಲ್ಲಿ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಜೆಡಿಎಸ್ ವಕ್ತಾರ ರಮೇಶ್ ಬಾಬು ಅವರು ಹೇಳಿದ್ದಾರೆ. 
ಜೆಡಿಎಸ್ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆದಿದ್ದು ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.