ರಾಜಕೀಯ

ಅಧಿಕಾರಿಗಳ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ: ವಿವಾದ

ಮುಖ್ಯಮಂತ್ರಿ ಸಿದ್ದರಾಮಯ್ಯಅವರ ಪುತ್ರ ಡಾ.ಯತೀಂದ್ರ ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಎಂಡಿಎ)ದ ಅಧಿಕಾರಿಗಳ ಸಭೆ ನಡೆಸುವ ಮೂಲಕ ಹೊಸ ವಿವಾದವೊಂದನ್ನು ಸೃಷ್ಟಿ...

ಅಧಿಕಾರಿಗಳ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ: ವಿವಾದ
ಮುಖ್ಯಮಂತ್ರಿ ಸಿದ್ದರಾಮಯ್ಯಅವರ ಪುತ್ರ ಡಾ.ಯತೀಂದ್ರ
Published On :
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯಅವರ ಪುತ್ರ ಡಾ.ಯತೀಂದ್ರ ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಎಂಡಿಎ)ದ ಅಧಿಕಾರಿಗಳ ಸಭೆ ನಡೆಸುವ ಮೂಲಕ ಹೊಸ ವಿವಾದವೊಂದನ್ನು ಸೃಷ್ಟಿ ಮಾಡಿದ್ದಾರೆ. 
ಮೈಸೂರು ನಗರದ ಟಿ.ಕೆ. ಬಡಾವಣೆಯ ತಮ್ಮ ನಿವಾಸಕ್ಕೆ ಅಧಿಕಾರಿಗಳನ್ನು ಕರೆಸಿಕೊಂಡಿದ್ದ ಯತೀಂದ್ರ ಅವರು ಸಭೆ ನಡೆಸಿದ್ದಾರೆ. ಯತೀಂದ್ರ ಅವರು ಯಾವುದೇ ಸಾಂವಿಧಾನಿಕ ಹುತ್ತೆ ಇಲ್ಲದಿದ್ದರೂ, ಸಿಎಂ ಪುತ್ರ ಎಂಬ ಒಂದೇ ಕಾರಣಕ್ಕೆ ಅಧಿಕಾರಿಗಳ ಸಭೆ ನಡೆಸಿರುವುದು ಇದೀಗ ತೀವ್ರ ಆಕ್ಷೇಪಕ್ಕೆ ಗುರಿಯಾಗಿದೆ. 
ಈ ಹಿಂದೆ ದಿವಂಗತ ರಾಕೇಶ್ ಸಿದ್ದರಾಮಯ್ಯ ಮತ್ತು ಡಾ.ಹೆಚ್.ಸಿ. ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಜಿಲ್ಲೆಯ ಕೆಲಸ ಮಾಡುತ್ತಿದ್ದರು. ಈ ಹಿಂದೆ ಡಾ.ಯತೀಂದ್ರ ಸಹ ಕೂಡಾ ಕಚೇರಿಯಲ್ಲಿ ಮುಖ್ಯಮಂತ್ರಿಗಳ ಕಾರ್ಯದರ್ಶಿ ರಾಮಯ್ಯ ನೇತೃತ್ವದಲ್ಲಿ ಒಮ್ಮೆ ಸಭೆ ನಡೆಸಿದ್ದರು. ಈಗ ಸ್ವತಃ ತಾವೇ ಸಭೆ ಕರೆದು ಚರ್ಚೆ ನಡೆಸಿದ್ದಾರೆ. ಈ ಸಭೆಯಲ್ಲಿ ಎಂಡಿಎ ಆಯುಕ್ತ ಡಾ. ಮಹೇಶ್, ಎಸ್ಇ ಶಿವಕುಮಾರ್ ಸೇರಿ ಅನೇಕ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. 
ಸಭೆ ಕುರಿತಂತೆ ಪ್ರತಿಕ್ರಿಯೆ ನೀಡಲು ಯತೀಂದ್ರ ಅವರು ಸಂಪರ್ಕಕ್ಕೆ ಸಿಕ್ಕಿಲ್ಲ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಎಂಡಿಎ)ದ ಅಧಿಕಾರಿಯೊಬ್ಬರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಾನೂ ಕೂಡ ಆ ಸಮಯದಲ್ಲಿ ಸಿದ್ದರಾಮಯ್ಯ ಅವರ ಮನೆಗೆ ಭೇಟಿ ನೀಡಿದ್ದೆ, ಆ ಸಮಯದಲ್ಲಿ ಸಿದ್ದರಾಮಯ್ಯ ಅವರೂ ಕೂಡ ಮನೆಯಲ್ಲಿರಬಹುದು ಎಂದುಕೊಂಡಿದ್ದೆ. ಯತೀಂದ್ರ ಅವರು ಸಭೆಯನ್ನು ಕರೆದಿರಲಿಲ್ಲ. ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ರಾಮಯ್ಯ ಅವರೇ ನಮ್ಮನ್ನು ಕರೆದಿದ್ದರು. 
ಈ ವೇಳೆ ಕೆಲ ರೈತರೂ ಕೂಡ ಸಿಎಂ ನಿವಾಸದ ಬಳಿ ಬಂದಿದ್ದರು. ಮನೆಗೆ ಭೇಟಿ ನೀಡಿದ ಬಳಿಕವಷ್ಟೇ ಸಿಎಂ ಮನೆಯಲ್ಲಿಲ್ಲ ಎಂಬುದು ತಿಳಿದಿತ್ತು. ವಿವಿಧ ಜಿಲ್ಲೆಗಳ 40 ಗ್ರಾಮಸ್ಥರು ಸಿಎಂ ನಿವಾಸದ ಬಳಿ ಬಂದಿದ್ದರು. ಇದರಲ್ಲಿ ಎರಡು ಗ್ರಾಮಗಳು ಮಾತ್ರ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕೆಳಗೆ ಬರುತ್ತದೆ. 10 ನಿಮಿಷಗಳ ಮಾತುಕತೆ ನಡೆಸಿದ್ದವೆ. ಗ್ರಾಮಸ್ಥರ ಬಳಿ ಅರ್ಜಿಗಳನ್ನು ಪಡೆದುಕೊಂಡು ಮರಳಿ ಅವರಿಗೆ ನೀಡಿದ್ದೆವು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.