ಯಾರ ಜೊತೆಗೂ ಮೈತ್ರಿಯಿಲ್ಲ, ಚುನಾವಣೆಗೆ ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ: ಸಿದ್ದರಾಮಯ್ಯ
2018 ವಿಧಾನಸಭಾ ಚುನಾವಣೆಗೆ ಯಾವುದೇ ರಾಜಕೀಯ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ, ಚುನಾವಣೆಗೆ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

Published On :
ಶಿವಮೊಗ್ಗ: 2018 ವಿಧಾನಸಭಾ ಚುನಾವಣೆಗೆ ಯಾವುದೇ ರಾಜಕೀಯ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ, ಚುನಾವಣೆಗೆ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
ಈ ಕುರಿತಂತೆ ಪತ್ರಿಕಾಗೋಷ್ಟಿಯಲ್ಲಿ ಮತನಾಡಿರುವ ಅವರು, ಮಹಾಮೈತ್ರಿ ದೇಶಕ್ಕೆ ಬೇಕು, ರಾಜ್ಯಕ್ಕಲ್ಲ. ರಾಜ್ಯದಲ್ಲಿ ಕೋಮುವಾದಿ ಪಕ್ಷಗಳು ಶಕ್ತಿಯುತವಾಗಿಲ್ಲವಾದ್ದರಿಂದ ಯಾವುದೇ ಪಕ್ಷದೊಂದಿಗೆ ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ದೇಶದಲ್ಲಿ ಕೋಮುವಾದಿ ಪಕ್ಷದ ವಿರುದ್ಧ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗೂಡುವ ಅಗತ್ಯವಿದೆ. ಆದರೆ, ರಾಜ್ಯಕ್ಕೆ ಇದು ಅಗತ್ಯವಿಲ್ಲ. ಚುನಾವಣೆ ಹಿನ್ನಲೆಯಲ್ಲಿ ಮುನ್ನಲೆಗೆ ಬಂದಿದ್ದ ಸಂಪುಟ ವಿಸ್ತರಣೆಯನ್ನು ಶೀಘ್ರದಲ್ಲಿಯೇ ಮಾಡಲಾಗುತ್ತದೆ. ವಿಐಪಿಗಳು ಮತ್ತು ವಿವಿಪಿಗಳು ಮತ್ತು ವಿವಿಐಪಿಗಳ ವಾಹನಗಳ ಮೇಲೆ ಕೆಂಪು ದೀಪ ಬಳಕೆ ಮಾಡುವ ಕುರಿತಂತೆ ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆಗಳೂ ಬಂದಿಲ್ಲ. ಪ್ರಸ್ತಾವನೆಗಳು ಬಂದ ಬಳಿಕ ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದರು.
ಇದೇ ವೇಳೆ ಹಾಲಿ ಅಂಗನವಾಡಿಗಳಲ್ಲಿ ಪರಿಶಿಷ್ಟ ಮಕ್ಕಳಿಗೆ ಮಾತ್ರ ಮೊಟ್ಟೆ ಕೊಡುವ ಯೋಜನೆ ಇದೆ. ಎಲ್ಲಾ ಮಕ್ಕಳಿಗೂ ವಿಸ್ತರಿಸುವ ಚಿಂತನೆ ಇದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


