ರಾಜಕೀಯ

ಹಳೇ ಮೈಸೂರು ಮಾತ್ರವಲ್ಲ, ಇಡೀ ಕರ್ನಾಟಕದಲ್ಲಿ ಪಾರುಪತ್ಯ ಸ್ಥಾಪಿಸಲು ಜೆಡಿಎಸ್ ಕಾರ್ಯತಂತ್ರ

ಕಳೆದ 10 ವರ್ಷಗಳಿಂದ ಯಾವುದೇ ಅಧಿಕಾರವಿಲ್ಲದೇ ಮೂಲೆಗುಂಪಾಗಿರುವ ಪ್ರಾದೇಶಿಕ ಪಕ್ಷ ಜೆಡಿಎಸ್ 2018 ವಿಧಾನ ಸಭೆ ಚುನಾವಣೆಯಲ್ಲಿ ..

ಹಳೇ ಮೈಸೂರು ಮಾತ್ರವಲ್ಲ, ಇಡೀ ಕರ್ನಾಟಕದಲ್ಲಿ ಪಾರುಪತ್ಯ ಸ್ಥಾಪಿಸಲು ಜೆಡಿಎಸ್ ಕಾರ್ಯತಂತ್ರ
ಎಚ್.ಡಿ ಕುಮಾರಸ್ವಾಮಿ
Published On :
ಬೆಂಗಳೂರು: ಕಳೆದ 10 ವರ್ಷಗಳಿಂದ ಯಾವುದೇ ಅಧಿಕಾರವಿಲ್ಲದೇ ಮೂಲೆಗುಂಪಾಗಿರುವ ಪ್ರಾದೇಶಿಕ ಪಕ್ಷ ಜೆಡಿಎಸ್ 2018 ವಿಧಾನ ಸಭೆ ಚುನಾವಣೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಿದ್ಧತೆ ನಡೆಸುತ್ತಿದೆ. ಈ ಹಿನ್ನೆಲೆಯ ಪಕ್ಷದ ಪುನರ್ ಸಂಘಟನೆಯತ್ತ ಹೆಚ್ಚಿನ ಒಲವು ತೋರುತ್ತಿರುವ ಜೆಡಿಎಸ್ ಕಿಂಗ್ ಮೇಕರ್ ಹಣೆಪಟ್ಟಿಯನ್ನು ಕಿತ್ತೊಗೆದು, ಸ್ವತಃ ರಾಜನ ಸ್ಥಾನದಲ್ಲಿ ಕೂರಲು ಬಯಸುತ್ತಿದೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಯಾವ ಪಕ್ಷದೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಳ್ಳುವುದಿಲ್ಲ, ರಾಜ್ಯದ 224 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಏಕಾಂಗಿಯಾಗಿ ಸ್ಪರ್ದಿಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಘೋಷಿಸಿದ್ದಾರೆ. ಎಲ್ಲಾ ಪಕ್ಷಗಳಿಗಿಂತ ಜೆಡಿಎಸ್ ತುಸು ಭಿನ್ನವಾಗಿ ಕಾರ್ಯನಿರ್ವಹಿಸಲು ಹೊರಟಿದೆ. ಹೀಗಾಗಿ ಮುಂದಿನ ವಿದಾನಸಭೆ ಚುನಾವಣೆಗೆ ಮೇ ತಿಂಗಳ ಮೊದಲ ವಾರದಲ್ಲಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡುವ ಭರವಸೆ ನೀಡಿದ್ದಾರೆ.
ಸದ್ಯ ಜೆಡಿಎಸ್ ತಳ ಮಟ್ಟದ ಕಾರ್ಯಕರ್ತರತ್ತ ಗಮನ ಕೇಂದ್ರೀಕರಿಸಿದೆ. ಜೊತೆಗೆ ಸೂಕ್ತ ಅಭ್ಯರ್ಥಿಗಳ ಆಯ್ಕೆಯತ್ತ ಚಿತ್ತ ಹರಿಸಿದೆ, ಅದಕ್ಕೂ ಮೊದಲು ಪಕ್ಷದ ಪ್ರಣಾಳಿಕೆ ಸಿದ್ದಪಡಿಸುತ್ತಿದೆ. ಇದೆಲ್ಲಾ ಮುಂದಿನ ಮೂರು ತಿಂಗಳಲ್ಲಿ ನಡೆಯಬೇಕಾಗಿದೆ,
ಇನ್ನೂ ಪಕ್ಷದಲ್ಲಿ ಖಾಲಿಯಿರುವ ವಿವಿಧ ಸ್ಥಾನಗಳನ್ನು ತುಂಬಲು ನಿರ್ಧರಿಸಿದೆ. ಮಹಿಳೆ ಮತ್ತು ಯುವ ಘಟಕಗಳು ಸೇರಿದಂತೆ ಎಲ್ಲಾ  22 ಘಟಕಗಳಿಗೂ 300 ಮಂದಿಯನ್ನು ನೇಮಕ ಮಾಡಲು ಯೋಜಿಸಲಾಗುತ್ತಿದೆ ಎಂದು ಜೆಡಿಎಸ್ ಎಂ ಎಲ್ ಸಿ , ರಮೇಶ್ ಬಾಬು ಹೇಳಿದ್ದಾರೆ.
ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಪ್ರಾಬಲ್ಯ ಹೊಂದಿರುವ ಜೆಡಿಎಸ್ ಸದ್ಯ ಸಂಪೂರ್ಣ ಕರ್ನಾಟಕದತ್ತ ಗಮನ ಕೇಂದ್ರೀಕರಿಸಿದೆ. ಮಹದಾಯಿ ನದಿ ನೀರು ಹಂಚಿಕೆ, ಬರದಿಂದ ತತ್ತರಿಸಿರುವ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ರೈತ ಪರ ಪಕ್ಷವೆಂದು ಘೋಷಿಸಿಕೊಂಡಿರುವ ಜೆಡಿಎಸ್ ಗೆ ಉತ್ತರ ಕರ್ನಾಟಕ ಸ್ವಲ್ಪ ಮಟ್ಟಿಗೆ ವರದಾನ ವಾಗಬಹುದು.
ಹೈದರಾಬಾದ್-ಕರ್ನಾಟಕ ಮತ್ತು ಮುಂಬಯಿ ಕರ್ನಾಟಕಗಳಲ್ಲಿ ಒಟ್ಟು 86 ವಿಧಾನಸಭೆ ಕ್ಷೇತ್ರಗಳಿವೆ, ಸದ್ಯ ಜೆಡಿಎಸ್ ಈ ಭಾಗದಲ್ಲಿ 7ಸ್ಥಾನಗಳನ್ನು ಜೆಡಿಎಸ್ ಪಡೆದುಕೊಂಡಿರುವುದು ಪಕ್ಷಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ.
ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಗಾದ ಮಾತ್ರ ಜೆಡಿಎಸ್ ಗೆ ಇದೆಲ್ಲಾ ಸಾಧ್ಯವಾಗಲಿದೆ, ಎಂದು ಬರಹಗಾರ ಹುಳಿಯಾರು ನಾಗರಾಜ ಹೇಳಿದ್ದಾರೆ, ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್ ಕೂಡ ಪ್ರಬಲ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು
ಯೋಜನೆ ರೂಪಿಸುತ್ತಿದೆ. ಯಾವುದೇ ಮೈತ್ರಿ ಮಾಡಿಕೊಳ್ಳದೇ ಜೆಡಿಎಸ್ ಕಣಕ್ಕಳಿದರೇ ರಾಜ್ಯಾದ್ಯಂತ 60 ಕ್ಷೇತ್ರಗಳ್ಲಲಿ ಪಕ್ಷ ಜಯಗಳಿಸಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.