ಈಶ್ವರಪ್ಪರನ್ನು ಬಿಜೆಪಿಯಿಂದ ಕಿತ್ತೊಗೆಯಿರಿ: ಬಿಎಸ್ ವೈ ಬೆಂಬಲಿಗ ಶಾಸಕರ ಆಗ್ರಹ
ಕೆ.ಎಸ್ ಈಶ್ವರಪ್ಪ ನೇತೃತ್ವದ ಅತೃಪ್ತರ ಬಣ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ಮುಗಿಸುತ್ತಿದ್ದಂತೆ ಬಿಜೆಪಿ ನಾಯಕರು..

Published On :
ಬೆಂಗಳೂರು: ಕೆ.ಎಸ್ ಈಶ್ವರಪ್ಪ ನೇತೃತ್ವದ ಅತೃಪ್ತರ ಬಣ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾವೇಶ ಮುಗಿಸುತ್ತಿದ್ದಂತೆ ಬಿಜೆಪಿ ನಾಯಕರು ತಿರುಗಿ ಬಿದ್ದಿದ್ದಾರೆ.
ಬೆಂಗಳೂರಿನ ಬಿಜೆಪಿ ಸಂಸದರು ಮತ್ತು ಶಾಸಕರು ಮಲ್ಲೇಶ್ವರಂ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಈಶ್ವರಪ್ಪ ವಿರುದ್ಧ ಹರಿಹಾಯ್ದಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ಕೆ.ಎಸ್. ಈಶ್ವರಪ್ಪ ಮತ್ತು ಅವರ ಬೆಂಬಲಿಗರನ್ನು ಉಚ್ಚಾಟಿಸುವಂತೆ ಬಿಎಸ್ ವೈ ಬೆಂಬಲಿಗ ಶಾಸಕರು ಆಗ್ರಹಿಸಿದ್ದಾರೆ.
ಶಾಸಕ ವೈ.ಎ. ನಾರಾಯಣಸ್ವಾಮಿ, ಎಂ. ಕೃಷ್ಣಪ್ಪ. ರವಿ ಸುಬ್ರಮಣ್ಯ, ವಿಜಯ್ ಕುಮಾರ್ ಅವರು ಈಶ್ವರಪ್ಪ ಅವರ ವಿರುದ್ಧ ವಾಗ್ದಾಳಿ ನಡೆಸಿ ‘ಈಶ್ವರಪ್ಪ ಅವರ ಎಲ್ಲ ಚಟುವಟಿಕೆಗಳನ್ನೂ ಪಕ್ಷದ ಕೇಂದ್ರ ನಾಯಕರು ಗಮನಿಸಿದ್ದಾರೆ. ಕೂಡಲೇ ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು. ಒಂದೆರಡು ದಿನಗಳಲ್ಲಿ ಕೇಂದ್ರ ನಾಯಕರು ಶಿಸ್ತು ಕ್ರಮ ಕೈಗೊಳ್ಳಲಿದ್ದಾರೆ’ ಎಂದರು.
ಸಮಾವೇಶ ನಡೆಸುವ ಮೂಲಕ ಈಶ್ವರಪ್ಪ ಪಕ್ಷದ ರಾಜ್ಯ ನಾಯಕರುಗಳ ವಿರುದ್ಧ ಅವಹೇಳನಕಾರಿಯಾದ ಹೇಳಿಕೆ ನೀಡುತ್ತಿದ್ದಾರೆ. ಹೀಗಾಗಿ ಕೂಡಲೇ ಅವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಯಡಿಯೂರಪ್ಪ ಅವರ ಮಿಷನ್ 150 ಗೆ ಪೆಟ್ಟು ನೀಡಲು ಸಿಎಂ ಸಿದ್ದರಾಮಯ್ಯ, ಈಶ್ವರಪ್ಪ ಮತ್ತು ಜೆಡಿಎಸ್ ಮುಖಂಡ ಎಚ್ .ಡಿಕುಮಾರ ಸ್ವಾಮಿ ರಹಸ್ಯ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂಬ ವದಂತಿಗಳು ಕೇಳಿ ಬರುತ್ತಿವೆ .
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


