ಸಚಿವ ಡಿ.ಕೆ.ಶಿಯನ್ನು ಸತತ ನಾಲ್ಕು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ ಐಟಿ ಇಲಾಖೆ ಅಧಿಕಾರಿಗಳು
ಆದಾಯ ತೆರಿಗೆ ಇಲಾಖೆ ನೀಡಿದ ಸಮನ್ಸ್ ಗೆ ನಿನ್ನೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಆದಾಯ ತೆರಿಗೆ...

Published On :
ಬೆಂಗಳೂರು: ಆದಾಯ ತೆರಿಗೆ ಇಲಾಖೆ ನೀಡಿದ ಸಮನ್ಸ್ ಗೆ ನಿನ್ನೆ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕಚೇರಿಗೆ ವಿಚಾರಣೆಗೆಂದು ರಾಜ್ಯ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್, ಅವರ ಸೋದರ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಹಾಜರಾಗಿದ್ದರು. ಇಬ್ಬರನ್ನೂ ಐಟಿ ಇಲಾಖೆ ಅಧಿಕಾರಿಗಳು 4 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದರು.
ಬೆಳಗ್ಗೆ 10.30ರ ಸುಮಾರಿಗೆ ಆದಾಯ ತೆರಿಗೆ ಇಲಾಖೆ ಕಚೇರಿಗೆ ಆಗಮಿಸಿದ ಶಿವಕುಮಾರ್ ಅವರ ಮನೆ, ಕಚೇರಿ ಹಾಗೂ ವಿವಿಧ ಆಸ್ತಿಗಳ ಮೇಲೆ ಕಳೆದ ವಾರ ನಡೆಸಿದ ದಾಳಿಗೆ ಸಂಬಂಧಪಟ್ಟಂತೆ ಅಧಿಕಾರಿಗಳು ವಿಚಾರಣೆ ನಡೆಸಿದರು. ಆಗಸ್ಟ್ 2ರಿಂದ 5ರವರೆಗೆ ನಡೆದ ದಾಳಿಗೆ ಸಂಬಂಧಪಟ್ಟಂತೆ ವಿಚಾರಣೆಗಾಗಿ ಆದಾಯ ತೆರಿಗೆ ಕಾಯ್ದೆ 131ರಡಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಸಮನ್ಸ್ ಜಾರಿ ಮಾಡಲಾಗಿತ್ತು.
ಅಪರಾಹ್ನ 2.45ರ ಸುಮಾರಿಗೆ ನಿನ್ನೆ ವಿಚಾರಣೆ ಮುಗಿಸಿ ಹೊರಬಂದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಸಮನ್ಸ್ ಜಾರಿ ಹಿನ್ನೆಲೆಯಲ್ಲಿ ತಾವು ವಿಚಾರಣೆಗೆ ಹಾಜರಾಗಿದ್ದು ಅವರು ಕೇಳಿರುವ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದ್ದೇನೆ. ಅಗತ್ಯಬಿದ್ದರೆ ಮಾತ್ರ ಮುಂದಿನ ದಿನಗಳಲ್ಲಿ ವಿಚಾರಣೆಗೆ ಕರೆಯುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೆ ವಿಚಾರಣೆಗೆ ಹಾಜರಾಗಲು ಹೇಳಿಲ್ಲ ಎಂದರು.
ವಿಚಾರಣೆ ನಡೆಸಿದ ಅಧಿಕಾರಿಗಳು ಕೆಲವು ದಾಖಲೆಗಳನ್ನು ಸಲ್ಲಿಸುವಂತೆ ಹೇಳಿದ್ದು, ತಮ್ಮ ಆಡಿಟರ್ ಗೆ ಅಧಿಕಾರಿಗಳು ಕೇಳಿರುವ ದಾಖಲೆಗಳನ್ನು ನೀಡುವಂತೆ ಹೇಳಿದ್ದೇನೆ. ಐಟಿ ಇಲಾಖೆ ಅಧಿಕಾರಿಗಳ ಮುಂದೆ ನಾನು ಹಾಜರಾಗುವುದು ಇದು ಮೊದಲ ಸಲವೇನಲ್ಲ. ಈ ಹಿಂದೆ ಕೂಡ ನನ್ನನ್ನು ಕರೆದಾಗಲೆಲ್ಲ ಅನೇಕ ಬಾರಿ ಹಾಜರಾಗಿದ್ದೇನೆ ಎಂದು ಶಿವಕುಮಾರ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


