ಭಾರತವನ್ನು ಹಿಂದೂ ರಾಷ್ಟ್ರ ಮಾಡುವುದೇ ಬಿಜೆಪಿಯ ಅಜೆಂಡಾ: ಸಿಎಂ ಸಿದ್ದರಾಮಯ್ಯ
ಭಾರತವನ್ನು ಹಿಂದೂ ರಾಷ್ಟ್ರ ಮಾಡುವುದೇ ಬಿಜೆಪಿಯವರ ಅಜೆಂಡವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ...

Published On :
ಬೆಂಗಳೂರು: ಭಾರತವನ್ನು ಹಿಂದೂ ರಾಷ್ಟ್ರ ಮಾಡುವುದೇ ಬಿಜೆಪಿಯವರ ಅಜೆಂಡವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ನಡೆದ ಕ್ವಿಟ್ ಇಂಡಿಯಾ ಚಳುವಳಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಭಾರತೀಯ ಜನತಾ ಪಕ್ಷ(ಬಿಜೆಪಿ)ವೆಂದರೆ ಅದು ಡೋಂಗಿ ಪಕ್ಷ. ಬಿಜೆಪಿಯರ ಡೋಂಗಿ ತನವನ್ನು ನಾವು ಕಳಚಿಡಬೇಕು. ದೇಶದಲ್ಲಿ ಗೋರಕ್ಷಣೆ ಹೆಸರಲ್ಲಿ ದಲಿತರ ಕೊಲೆಯಾಗುತ್ತಿದೆ. ಆದರೂ ಈ ಹತ್ಯೆಗಳ ಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನು ದಲಿತರ ಓಲೈಕೆಗಾಗಿ ನಮ್ಮ ನಡೆ ದಲಿತರ ಕಡೆ ಎಂಬ ಯೋಜನೆ ತಂದರು. ದಲಿತರ ಮನೆಯಲ್ಲಿ ಊಟ ಮಾಡುವಂತೆ ಫೋಸ್ ಕೊಟ್ಟ ಬಿಜೆಪಿ ನಾಯಕರು ಹೊಟೇಲ್ ಊಟ ತಂದು ದಲಿತರ ಮನೆಯಲ್ಲಿ ತಿಂದರು ಎಂದು ಸಿದ್ದು ಬಿಜೆಪಿ ವಿರುದ್ದ ಗುಡುಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


