ಮೋದಿ ಸರ್ಕಾರದಿಂದ ಸುಳ್ಳು ಭರವಸೆ, ಬಿಜೆಪಿಗೆ ಬಡವರ ಬಗ್ಗೆ ಕಾಳಜಿ ಇಲ್ಲ: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜನರಿಗೆ ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಿದೆ. ಬಿಜೆಪಿ ಮತ್ತು..

Published On :
ರಾಯಚೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜನರಿಗೆ ಕೇವಲ ಸುಳ್ಳು ಭರವಸೆಗಳನ್ನು ನೀಡುತ್ತಿದೆ. ಬಿಜೆಪಿ ಮತ್ತು ಆರ್ ಎಸ್ ಎಸ್ ಗೆ ಬಡವರ ಬಗ್ಗೆ ಯಾವುದೇ ಕಾಳಜಿ ಇಲ್ಲ. ಹಿಂದುಳಿದವರ ಧ್ವನಿ ಕೇವಲ ಕಾಂಗ್ರೆಸ್ ಮಾತ್ರ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶನಿವಾರ ವಾಗ್ದಾಳಿ ನಡೆಸಿದ್ದಾರೆ. ಹೇಳಿದರು.
ಇಂದು ರಾಯಚೂರಿನಲ್ಲಿ ನಡೆದ ಬೃಹತ್ ಕಾಂಗ್ರೆಸ್ ಸಮಾವೇಶ ಉದ್ದೇಶಿಸಿ ಮಾತನಾಡಿದ ರಾಹುಲ್, ಬಿಜೆಪಿಗೆ ರೈತರ ಬಗ್ಗೆ ಕಾಳಜಿಯೇ ಇಲ್ಲ ಎಂದು ಆರೋಪಿಸಿದರು. ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯನವರು ಎರಡು ದಿನದಲ್ಲಿಯೇ ರೈತರ ಸಾಲವನ್ನು ಮನ್ನಾ ಮಾಡಿದ್ದರು, ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ಯಾಕೆ ಸಾಲ ಮನ್ನಾ ಮಾಡಿಲ್ಲ ಎಂದು ಪ್ರಶ್ನಿಸಿದರು.
ನಾವು ಯಾವುದೇ ಭರವಸೆಗಳನ್ನು ನೀಡುವುದಿಲ್ಲ. ಆದರೆ ಮಾಡಿ ತೋರಿಸುತ್ತೇವೆ. ಕರ್ನಾಟಕ ಮತ್ತು ಪಂಜಾಬ್ ನಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ ಎಂದರು.
ಯುಪಿಎ ಸರ್ಕಾರ ಮೂರೇ ತಿಂಗಳಿನಲ್ಲಿ ಹೈದರಬಾದ್ ಕರ್ನಾಟಕಕ್ಕೆ ಅನುದಾನವನ್ನು ಬಿಡುಗಡೆ ಮಾಡಿದೆ. ಆದರೆ ಬಿಜೆಪಿ ಸರ್ಕಾರ ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದರು.
ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಿಜೆಪಿ ಮಾತೆತ್ತಿದರೆ ಕಾಂಗ್ರೆಸ್ ಮುಕ್ತ ಮಾಡುವ ಹೇಳಿಕೆ ನೀಡುತ್ತಿದೆ. ಆದರೆ ಯಾರಿಂದಲೂ ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು.
ನಿಮ್ಮೆಲ್ಲರ ಆಶೀರ್ವಾದದಿಂದ ನಾವು ನುಡಿದಂತೆ ನಡೆದಿದ್ದೇವೆ. ಇನ್ನು 8 ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಹಾಗಾಗಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಬೇಕು ಎಂದು ಮನವಿ ಮಾಡಿಕೊಂಡರು. ಹಿಂದುಳಿದ ವರ್ಗಗಳ ಬಗ್ಗೆ ಮೋದಿ ಸರ್ಕಾರ ಮೊಸಳೆ ಕಣ್ಣೀರು ಹಾಕುತ್ತಿದೆ ಎಂದು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


