ಒಗ್ಗಟ್ಟಾಗಿ ಚುನಾವಣೆಗೆ ಹೋಗಿ, ಇಲ್ಲವೇ ಶಿಸುಕ್ರಮ ಎದುರಿಸಿ: ಬಿಎಸ್ ವೈ, ಈಶ್ವರಪ್ಪಗೆ 'ಶಾ' ವಾರ್ನಿಂಗ್
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ,ಎಸ್ ಈಶ್ವರಪ್ಪ ನಡುವಿನ ಭಿನ್ನಮತ ರಾಷ್ಟ್ರೀಯ ಅಧ್ಯಕ್ಷ ಅಮಿತ್ ...

Published On :
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮತ್ತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ,ಎಸ್ ಈಶ್ವರಪ್ಪ ನಡುವಿನ ಭಿನ್ನಮತ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕಣ್ಣು ಕೆಂಪಾಗಿಸಿದೆ.
ಭಾನುವಾರ ನಡೆದ ಸಭೆಯಲ್ಲಿ ಅಮಿತ್ ಶಾ ಈ ಸಂಬಂಧ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಪಕ್ಷದ ತತ್ವ ಸಿದ್ಧಾಂತಗಳನ್ನು ಕಡೆಗಣಿಸಿರುವ ಇಬ್ಬರು ನಾಯಕರ ವಿರುದ್ಧ ಕಿಡಿಕಾರಿರುವ ಅಮಿತ್ ಶಾ,ಒಗ್ಗಟ್ಟಾಗಿ ಚುನಾವಣೆಗೆ ತಯಾರಾಗಿ ಇಲ್ಲವೇ ಶಿಸ್ತುಕ್ರಮ ಎದುರಿಸಲು ಸಿದ್ಧರಾಗಿ ಎಂದು ವಾರ್ನಿಂಗ್ ನೀಡಿದ್ದಾರೆ.
ಈಶ್ವರಪ್ಪ ಪಿಎ ಕಿಡ್ನಾಪ್ ಯತ್ನ ಪ್ರಕರಣ ರಾಜ್ಯ ಮತ್ತು ರಾಷ್ಟ್ರ ನಾಯಕರಲ್ಲಿ ತೀವ್ರ ಇರಿಸು ಮುರಿಸು ಉಂಟು ಮಾಡಿದೆ. ಈ ಪ್ರಕರಣವನ್ನು ಕಾಂಗ್ರೆಸ್ ನಾಯಕರು ತಮ್ಮ ದಾಳವನ್ನಾಗಿ ಬಳಸಿಕೊಳ್ಳಲು ನೀವು ಅವಕಾಶ ನೀಡಿದ್ದೀರಿ ಎಂದು ಅಮಿತ್ ಶಾ ಆಕ್ರೋಶ ವ್ಯಕ್ತ ಪಡಿಸಿದ್ದಾರೆ ಎಂದು ಹೇಳಲಾಗಿದೆ.
ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ನಡೆಯುತ್ತಿರುವ ಕೋಮು ಗಲಭೆ ಮತ್ತು ಭ್ರಷ್ಟಾಚಾರ ವಿರುದ್ಧ ಹೋರಾಡಲು ಏಕೆ ಯಾವ ರಾಜ್ಯ ನಾಯಕರು ಆಸಕ್ತಿ ತೋರುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಐಟಿ ದಾಳಿಯ ನಂತರ ಇಂಧನ ಸಚಿವ ಡಿ.ಕೆ ಶಿವಕುಮಾರ್ ಅವರ ರಾಜೀನಾಮೆ ಏಕೆ ಕೇಳುತ್ತಿಲ್ಲ, ಪಕ್ಷಕ್ಕೆ ಮುಜುಗರ ತರುವಂತ ಕೆಲಸಗಳಲ್ಲಿ ಭಾಗಿಯಾಗುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಶಾ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ರಾಜಕೀಯ ವ್ಯವಹಾರಗಳ ಸಮಿತಿ ಸಭೆಯಲ್ಲಿ ಬಿ.ಎಸ್ ಯಡಿಯೂರಪ್ಪ, ಕೆ.ಎಸ್ ಈಶ್ವರಪ್ಪ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ. ಮುರುಳೀಧರ ರಾವ್ ಭಾಗವಹಿಸಿದ್ದರು.
ಈಗಲೇ ಚುನಾವಣೆಗೆ ತೆರಳಿದರೇ ಎಷ್ಟು ಸೀಟುಗಳನ್ನು ಗೆಲ್ಲಬಹುದು ಎಂಬ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ 120 ರಿಂದ 130 ಕ್ಷೇತ್ರಗಳಲ್ಲಿ ಜಯಗಳಿಸಬಹುದೆಂಬ ಉತ್ತರಕ್ಕೆ ಅಮಿತ್ ಶಾ ಆಕ್ಷೇಪ ವ್ಯಕ್ತ ಪಡಿಸಿದಿದ್ರಾೆ.
ಒಂದು ವೇಳೆ ಈಗಲೇ ಚುನಾವಣೆ ನಡೆದರೇ ಬಿಜೆಪಿ ಕೇವಲ 80 ಸೀಟುಗಳನ್ನು ಮಾತ್ರ ಗೆಲ್ಲಲು ಶಕ್ತವಾಗಿದೆ ಎಂದು ಸಮೀಕ್ಷೆ ತಿಳಿಸಿದೆ ಎಂದು ಅವರು ಹೇಳಿದ್ದಾರೆ. ಸಣ್ಣ ಪುಟ್ಟ ವಿಷಯಗಳನ್ನು ದೊಡ್ಡದು ಮಾಡಿಕೊಂಡರೇ ಮಿಷನ್ 150 ಕಷ್ಟಸಾಧ್ಯ ಎಂದು ಅಮಿತ್ ಶಾ ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


