ನಮ್ಮ ಮುಖ್ಯಮಂತ್ರಿಗಳು ರಾಷ್ಟ್ರೀಯ ಕಾಂಗ್ರೆಸ್ ಅನ್ನು ಸಿದ್ದರಾಮಯ್ಯ ಕಾಂಗ್ರೆಸ್ ಮಾಡಿದ್ದಾರೆ: ದೇವೇಗೌಡ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಸಿದ್ದರಾಮಯ್ಯ ಕಾಂಗ್ರೆಸ್ ಆಗಿ ಪರಿವರ್ತಿಸಿದ್ದಾರೆ ಎಂದು....

Published On :
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅನ್ನು ಸಿದ್ದರಾಮಯ್ಯ ಕಾಂಗ್ರೆಸ್ ಆಗಿ ಪರಿವರ್ತಿಸಿದ್ದಾರೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಶನಿವಾರ ವಾಗ್ದಾಳಿ ನಡೆಸಿದ್ದಾರೆ.
ಇಂದು ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ದೇವೇಗೌಡರು, ರಾಜ್ಯದಲ್ಲಿ ಇರುವುದು ಸಿದ್ದರಾಮಯ್ಯನ ಕಾಂಗ್ರೆಸ್. ಸಿದ್ದರಾಮಯ್ಯ ಅವರನ್ನು ಬಿಟ್ಟರೆ ಕಾಂಗ್ರೆಸ್‌ನ ಅಸ್ತಿತ್ವವೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪಕ್ಷದ ಯಾವ ಹಿರಿಯ ನಾಯಕರೂ ಮಾತನಾಡುತ್ತಿಲ್ಲ. ರಾಜ್ಯದ ಪಾಲಿಗೆ ಹೈಕಮಾಂಡ್ ಎನ್ನುವುದು ಇಲ್ಲದಂತಾಗಿದೆ ಎಂದು ಆರೋಪಿಸಿದ್ದಾರೆ.
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ನಿವಾಸ ಹಾಗೂ ಕಚೇರಿ ಮೇಲಿನ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಜೆಡಿಎಸ್ ವರಿಷ್ಠ, ಭ್ರಷ್ಟಾಚಾರದ ಬಗ್ಗೆ ಇಷ್ಟು ದಿನಗಳ ಕಾಲ ಕಾಂಗ್ರೆಸ್ ಹಾಗೂ ಬಿಜೆಪಿಯ ಮುಖಂಡರು ತುಟಿಬಿಚ್ಚಿರಲಿಲ್ಲ. ಪರಸ್ಪರ ಹೊಂದಾಣಿಕೆ ಮಾಡಿಕೊಂಡಿದ್ದರು. ಬಿಜೆಪಿ ಅಧ್ಯಕ್ಷ ಅಮಿತ್ ಷಾ ಬಂದು ಹೋದ ಮೇಲೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಮಾಡಿದ್ದ ಭ್ರಷ್ಟಾಚಾರದ ಬಗ್ಗೆ ಗೊತ್ತಿದ್ದರೂ ಸಿಎಂ ಸಿದ್ದರಾಮಯ್ಯ ಇಷ್ಟು ವರ್ಷ ಏಕೆ ಮಾತನಾಡಲಿಲ್ಲ? ಯಡಿಯೂರಪ್ಪ ಕೂಡ ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಏಕೆ ಧ್ವನಿ ಎತ್ತಲಿಲ್ಲ? ಎಂದು ಪ್ರಶ್ನಿಸಿದ ದೇವೇಗೌಡರು, ಎಚ್.ಡಿ ಕುಮಾರಸ್ವಾಮಿ ಒಬ್ಬರೇ ಎರಡೂ ಪಕ್ಷಗಳ ವಿರುದ್ಧ ಹೋರಾಟ ಮಾಡಿದರು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಎಚ್ ಡಿ ದೇವೇಗೌಡH D DevegowdaNational CongressSiddaramaiah Congressರಾಷ್ಟ್ರೀಯ ಕಾಂಗ್ರೆಸ್ಸಿದ್ದರಾಮಯ್ಯ ಕಾಂಗ್ರೆಸ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


