ರಾಜಕೀಯ

ಮಧುಮಗಳು ಚೆನ್ನಾಗಿದ್ದರೆ ಗಂಡುಗಳು ಹೆಚ್ಚು ಬರುತ್ತವೆ: ಸಿಎಂ ಇಬ್ರಾಹಿಂ

ಮಧುಮಗಳು ಚೆನ್ನಾಗಿದ್ದರೆ ಮದುವೆಯಾಗಲು ಗಂಡುಗಳು ಹೆಚ್ಚು ಬರುತ್ತವೆ. ಅದರಲ್ಲಿ ವಿಶೇಷವೇನೂ ಇಲ್ಲ’ ಎಂದು ಹೇಳುವ ಮೂಲಕ ಹಿರಿಯ ಕಾಂಗ್ರೆಸ್ಸಿಗ...

ಮಧುಮಗಳು ಚೆನ್ನಾಗಿದ್ದರೆ ಗಂಡುಗಳು ಹೆಚ್ಚು ಬರುತ್ತವೆ: ಸಿಎಂ ಇಬ್ರಾಹಿಂ
ಸಿಎಂ ಇಬ್ರಾಹಿಂ
Published On :
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಜಿ. ಪರಮೇಶ್ವರ್ ಶನಿವಾರ ಪದಾಧಿಕಾರಿಗಳ ಸಭೆ ನಡೆಸಿದರು. ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ಉದ್ದೇಶದಿಂದ ನಿಮಗೆ ಹೊಣೆಗಾರಿಕೆ ವಹಿಸಿರುವ ಕ್ಷೇತ್ರಗಳಲ್ಲಿ ಹೆಚ್ಚಿನ ಸಮಯ ವಿನಿಯೋಗಿಸಬೇಕು. ಜಿಲ್ಲಾ ಮತ್ತು ಬ್ಲಾಕ್‌ ಅಧ್ಯಕ್ಷರ ಸಹಯೋಗ ಪಡೆದು, ನಿಮ್ಮ ಪ್ರಭಾವ ಮತ್ತು ಕಾರ್ಯತಂತ್ರ ಬಳಸಿ ತಕ್ಷಣದಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದು ನಿರ್ದೇಶನ ನೀಡಿದ್ದಾರೆ.
ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಸೂಚನೆ ಮೇರೆಗೆ ರಾಜ್ಯದ 23 ಜಿಲ್ಲಾ ಘಟಕಗಳ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ನಡೆದಿದ್ದು, ಗೊಂದಲಗಳಿರುವ ಹಾಸನ, ಮಂಡ್ಯ, ವಿಜಯಪುರ ಮತ್ತು ಬಳ್ಳಾರಿ ಜಿಲ್ಲಾ ಮುಖಂಡರ ಜೊತೆ ಪರಮೇಶ್ವರ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು.
ಇನ್ನೂ ಬಿ. ಶಿವರಾಂ ಅವರನ್ನ ಡಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿದ  ನಂತರ ನಿರಂತರ ವಿರೋಧಗಳು ವ್ಯಕ್ತವಾದ ಹಿನ್ನೆಲೆಯಲ್ಲಿ  ಅವರನ್ನು ಬದಲಿಸಲು ಕೆಪಿಸಿಸಿ ನಿರ್ಧರಿಸಿದೆ. ಕೇವಲ ಒಕ್ಕಲಿಗರಿಗೆ ಪ್ರಾತಿನಿಧ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಮಧುಮಗಳು ಚೆನ್ನಾಗಿದ್ದರೆ ಮದುವೆಯಾಗಲು ಗಂಡುಗಳು ಹೆಚ್ಚು ಬರುತ್ತವೆ. ಅದರಲ್ಲಿ ವಿಶೇಷವೇನೂ ಇಲ್ಲ’ ಎಂದು ಹೇಳುವ ಮೂಲಕ ಹಿರಿಯ ಕಾಂಗ್ರೆಸ್ಸಿಗ ಸಿ.ಎಂ.ಇಬ್ರಾಹಿಂ, ತಮಗೆ ಜೆಡಿಎಸ್ ಸೇರುವ ಆಹ್ವಾನ ಬಂದಿದ್ದನ್ನು ಪರೋಕ್ಷವಾಗಿ ಒಪ್ಪಿಕೊಂಡರು.
ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಯಾಗಿ ಆಯ್ಕೆ ಆಗಿದ್ದರಿಂದ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಸ್ಥಾನಕ್ಕೆ ಸಿ.ಎಂ ಇಬ್ರಾಹಿಂ ರಾಜೀನಾಮೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.