ರಾಜಕೀಯ

ಬೆಂಗಳೂರು: ಡಿ.ಕೆ ಶಿವಕುಮಾರ್ ಪರಮಾಪ್ತ ವರ ಪ್ರಸಾದ್ ರೆಡ್ಡಿ ಬಿಜೆಪಿ ಸೇರ್ಪಡೆ

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಅವರ ಪರಮಾಪ್ತರಾಗಿದ್ದ ಕಾಂಗ್ರೆಸ್‌ ಮುಖಂಡ ವರಪ್ರಸಾದ್‌ ರೆಡ್ಡಿ ...

ಬೆಂಗಳೂರು: ಡಿ.ಕೆ ಶಿವಕುಮಾರ್ ಪರಮಾಪ್ತ ವರ ಪ್ರಸಾದ್ ರೆಡ್ಡಿ ಬಿಜೆಪಿ ಸೇರ್ಪಡೆ
ಡಿ.ಕೆ ಶಿವಕುಮಾರ್
Published On :
ಬೆಂಗಳೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ಅವರ ಪರಮಾಪ್ತರಾಗಿದ್ದ ಕಾಂಗ್ರೆಸ್‌ ಮುಖಂಡ ವರಪ್ರಸಾದ್‌ ರೆಡ್ಡಿ ಅವರು  ಬಿಜೆಪಿ ಸೇರ್ಪಡೆಯಾಗಿದ್ದಾರೆ. 
ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಬೆಂಬಲಿಗರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸಮ್ಮುಖದಲ್ಲಿ  ಬಿಜೆಪಿಗೆ ಸೇರ್ಪಡೆಯಾದರು. 
ವರಪ್ರಸಾದ್‌ ರೆಡ್ಡಿ ಉತ್ತರಹಳ್ಳಿ ವಾರ್ಡ್‌ನಿಂದ ಬಿಬಿಎಂಪಿ ಚುನಾವಣೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. 
ಇತ್ತೀಚೆಗೆ ಸಚಿವ ಡಿ.ಕೆ ಶಿವಕುಮಾರ್ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಹಿನ್ನೆಲೆಯಲ್ಲಿ ರೆಡ್ಡಿ ಬಿಜೆಪಿ ಸೇರಿದ್ದಾರೆ ಎಂದು ಹೇಳಲಾಗಿದೆ. ಆದರೆ ಈ ಆರೋಪವನ್ನು ವರಪ್ರಸಾದ್ ರೆಡ್ಡಿ ನಿರಾಕರಿಸಿದ್ದಾರೆ.
ಇನ್ನೂ ಜೆಡಿಎಸ್ ಹಾಗೂ ಕಾಂಗ್ರೆಸ್ ನ ಹಲವು ಮುಖಂಡರು ಶೀಘ್ರವೇ ಬಿಜೆಪಿ ಸೇರಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.