ಸೆಪ್ಟೆಂಬರ್ 1ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ
ಕಡೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮಹೂರ್ತ ನಿಗದಿಯಾಗಿದೆ. ಸೆ. 1 ಕ್ಕೆ ಮೂವರು ಶಾಸಕರು ಸಿದ್ದರಾಮಯ್ಯ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ.

Published On :
ಬೆಂಗಳೂರು: ಕಡೆಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮಹೂರ್ತ ನಿಗದಿಯಾಗಿದೆ. ಸೆ. 1 ಕ್ಕೆ ಮೂವರು ಶಾಸಕರು ಸಿದ್ದರಾಮಯ್ಯ ಸಂಪುಟಕ್ಕೆ ಸೇರ್ಪಡೆಯಾಗಲಿದ್ದಾರೆ. ಸಂಪುಟದಲ್ಲಿ ಖಾಲಿ ಇರುವ ಮೂರು ಸ್ಥಾನಗಳನ್ನು ಭರ್ತಿ ಮಾಡಲು ಸಿದ್ದರಾಮಯ್ಯ ನಿರ್ಧರಿಸಿ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರಿಂದ ಒಪ್ಪಿಗೆ ಪಡೆದು ಬಂದ ನಂತರ ದಿನಾಂಕವನ್ನು ನಿಗದಿ ಮಾಡಲಾಗಿದೆ.
ರಾಜ್ಯಪಾಲರಾದ ಜುಭಾಯಿ ವಾಲಾ ಅಂದು ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ.
ಎಚ್.ಎಂ.ರೇವಣ್ಣ, ಕೆ. ಷಡಕ್ಷರಿ ಹಾಗೂ ಆರ್.ವಿ. ತಿಮ್ಮಾಪುರ ಸಂಪುಟಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ.
ಸಚಿವರಾಗಿದ್ದ ಮಹದೇವಪ್ಪ ನಿಧನದಿಂದ ಒಂದು ಸ್ಥಾನ ತೆರವಾಗಿದ್ದರೆ, ಎಚ್.ವೈ.ಮೇಟಿ ಮತ್ತು ಡಾ.ಜಿ.ಪರಮೇಶ್ವರ ಅವರ ರಾಜೀನಾಮೆಯಿಂದ ಎರಡು ಸ್ಥಾನಗಳು ತೆರವಾಗಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಸಿದ್ದರಾಮಯ್ಯcabinet expansionSiddaramaihHM RevannaRV Timmapurಸಂಪುಟ ವಿಸ್ತರಣೆಎಚ್.ಎಂ.ರೇವಣ್ಣಆರ್.ವಿ. ತಿಮ್ಮಾಪುರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


