ಸಚಿವ ರಾಮಲಿಂಗಾ ರೆಡ್ಡಿಗೆ ಗೃಹ ಖಾತೆ ಹೊಣೆ, ನೂತನ ಸಚಿವ ರೇವಣ್ಣಗೆ ಸಾರಿಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸಾರಿಗೆ ಸಚಿವ ಆರ್ ರಾಮಲಿಂಗಾರೆಡ್ಡಿ ಅವರಿಗೆ ಗೃಹ ಖಾತೆಯ ಹೊಣೆ ವಹಿಸಿ ಆದೇಶ ಹೊರಡಿಸಿದ್ದಾರೆ.....

Published On :
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸಾರಿಗೆ ಸಚಿವ ಆರ್ ರಾಮಲಿಂಗಾರೆಡ್ಡಿ ಅವರಿಗೆ ಗೃಹ ಖಾತೆಯ ಹೊಣೆ ವಹಿಸಿ ಆದೇಶ ಹೊರಡಿಸಿದ್ದಾರೆ.
ಮೂರನೇ ಅವಧಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರಾಗಿ ಮುಂದುವರಿದ ಡಾ.ಜಿ. ಪರಮೇಶ್ವರ ಅವರ ರಾಜಿನಾಮೆಯಿಂದ ತೆರವಾಗಿದ್ದ ಗೃಹ ಖಾತೆಯನ್ನು ಸಿಎಂ ತಮ್ಮ ಬಳಿಯೇ ಉಳಿಸಿಕೊಂಡಿದ್ದರು. ಈ ಹಿಂದೆ ಅರಣ್ಯ ಖಾತೆ ಸಚಿವ ಬಿ. ರಮಾನಾಥ ರೈ ಅವರಿಗೆ ಗೃಹ ಖಾತೆ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿತ್ತು. ಆದರೆ ಅಂತಿಮವಾಗಿ ಸಿಎಂ ಇಂದು ರಾಮಲಿಂಗಾರೆಡ್ಡಿ ಅವರಿಗೆ ನಂ.2 ಸ್ಥಾನ ನೀಡಿದ್ದಾರೆ.
ಇಂದು ಸಂಜೆ ಸಂಪುಟ ವಿಸ್ತರಣೆ ಪ್ರಕ್ರಿಯೆ ಮುಗಿದ ಬಳಿಕ, ಖಾತೆ ಮರು ಹಂಚಿಕೆ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ರಾಮಲಿಂಗಾರೆಡ್ಡಿ ಅವರಿಗೆ ಗೃಹ ಖಾತೆ ನೀಡಿ, ಅವರ ಬಳಿ ಇದ್ದ ಸಾರಿಗೆ ಖಾತೆಯನ್ನು ನೂತನ ಸಚಿವ ಎಚ್.ಎಂ.ರೇವಣ್ಣ ಅವರಿಗೆ ನೀಡಿದ್ದಾರೆ. ಅಲ್ಲದೆ ಆರ್ ಬಿ ತಿಮ್ಮಾಪುರ ಅವರಿಗೆ ಅಬಕಾರಿ ಮತ್ತು ಗೀತಾ ಮಹದೇವ್ ಪ್ರಸಾದ್ ಅವರಿಗೆ ಸಕ್ಕರೆ ಮತ್ತು ಸಣ್ಣ ಕೈಗಾರಿಕೆ ಖಾತೆ ಹಂಚಿಕೆ ಮಾಡಿದ್ದಾರೆ.
ಮೊದಲ ಬಾರಿಗೆ ಶಾಸಕಿಯಾಗಿ ಆಯ್ಕೆಯಾಗಿರುವ ಗೀತಾ ಮಹದೇವ ಪ್ರಸಾದ್‌ಗೆ ರಾಜ್ಯ ಸಚಿವ ಸ್ಥಾನ ಹಾಗೂ ಈ ಹಿಂದೆ ಸಚಿವರಾಗಿ ಕಾರ್ಯನಿರ್ವಹಿಸಿ ಅನುಭವ ಇರುವ ರೇವಣ್ಣ ಮತ್ತು ತಿಮ್ಮಾಪೂರ ಅವರಿಗೆ ಸಂಪುಟ ದರ್ಜೆ ಸಚಿವ ಸ್ಥಾನ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


