ಜೆಡಿಎಸ್ ಅಧಿಕಾರಕ್ಕೆ ಬಂದರೆ ಎಸ್ಸಿ ಸಮುದಾಯಕ್ಕೆ ಉಪ ಮುಖ್ಯಮಂತ್ರಿ ಸ್ಥಾನ: ಎಚ್‌ಡಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಲಿತರ ಬಗ್ಗೆ ಕಾಳಜಿ, ತಮ್ಮ ಪಕ್ಷದ ದಲಿತ ಅಭ್ಯರ್ಥಿಗಳನ್ನು ತಾವೇ ಸೋಲಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ....

Published On :
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದಲಿತರ ಬಗ್ಗೆ ಕಾಳಜಿ, ತಮ್ಮ ಪಕ್ಷದ ದಲಿತ ಅಭ್ಯರ್ಥಿಗಳನ್ನು ತಾವೇ ಸೋಲಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇದು ಬಹಿರಂಗವಾಗಲಿದೆ ಎಂದು ಸಿಎಂ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಜೆಡಿಎಸ್ ರಾಜ್ಯಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಎಸ್ಸಿ ಸಮುದಾಯದವರನ್ನು ಉಪ ಮುಖ್ಯಮಂತ್ರಿ ಮಾಡುವುದಾಗಿ ಘೋಷಿಸಿದ್ದಾರೆ.
ಸಿದ್ದರಾಮಯ್ಯ ತಾವೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುವ ಮೂಲಕ ದಲಿತ ನಾಯಕರಾದ ಜಿ ಪರಮೇಶ್ವರ ಹಾಗೂ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಕಡೆಗಣಿಸಿದ್ದಾರೆ. ಅವರಿಗೆ ದಲಿತರ ಬಗ್ಗೆ ಯಾವುದೇ ಬದ್ದತೆ ಇಲ್ಲ ಮತ್ತು ಅವರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಜೆಡಿಎಸ್ ಅಧಿಕಾರಕ್ಕೆ ಬಂದರೆ ದಲಿತರಿಗೆ ಡಿಸಿಎಂ ಸ್ಥಾನ ನೀಡಲಾಗುವುದು ಎಂದು ನಾವು ಈಗಾಗಲೇ ಘೋಷಿಸಿದ್ದೇವೆ. ಕಾಂಗ್ರೆಸ್ ಹಾಗೂ ಬಿಜೆಪಿಗೆ ತಾಕತ್ತಿದ್ದರೆ ಈ ರೀತಿ ಘೋಷಣೆ ಮಾಡಲಿ ಎಂದು ಎಚ್ ಡಿಕೆ ಸವಾಲೆಸೆದಿದ್ದಾರೆ.
ಮತದಾರರು ಕಾಂಗ್ರೆಸ್ ಹಾಗೂ ಬಿಜೆಪಿಗೆ ಮತ ನೀಡಿ ನಿಮ್ಮ ವೋಟು ವ್ಯರ್ಥ ಮಾಡಿಕೊಳ್ಳಬೇಡಿ. ಆ ಎರಡೂ ಪಕ್ಷ ಗಳಿಗೆ ಬಡಜನರ ಅಭಿವೃದ್ಧಿ ಬೇಕಾಗಿಲ್ಲ. ಬಡವರ ರಕ್ತ ಕುಡಿದು ಅಧಿಕಾರದ ಸಾಮ್ರಾಜ್ಯ ನಿರ್ಮಿಸಲು ಹೊರಟಿರುವ ಎರಡೂ ಪಕ್ಷ ಗಳಿಗೆ ಮುಂದಿನ ದಿನಗಳಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


