ರಾಜಕೀಯ

ಪ್ರತಾಪ್ ಸಿಂಹ ಒಬ್ಬ ಹುಚ್ಚ, ಹುಚ್ಚಾಸ್ಪತ್ರೆಗೆ ಸೇರಿಸಬೇಕು: ಸಚಿವ ವಿನಯ ಕುಲಕರ್ಣಿ

ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಒಬ್ಬ ಹುಚ್ಚ, ಬಿಜೆಪಿಯವರು ಮೊದಲು ಆತನನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು....

ಪ್ರತಾಪ್ ಸಿಂಹ ಒಬ್ಬ ಹುಚ್ಚ, ಹುಚ್ಚಾಸ್ಪತ್ರೆಗೆ ಸೇರಿಸಬೇಕು: ಸಚಿವ ವಿನಯ ಕುಲಕರ್ಣಿ
ವಿನಯ್ ಕುಲಕರ್ಣಿ
Published On :
ಧಾರವಾಡ: ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಒಬ್ಬ ಹುಚ್ಚ, ಬಿಜೆಪಿಯವರು ಮೊದಲು ಆತನನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ ಕುಲಕರ್ಣಿ ಅವರು ಸೋಮವಾರ ಲೇವಡಿ ಮಾಡಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇತ್ತೀಚಿನ ದಿನಗಳಲ್ಲಿ ಪ್ರತಾಪ್ ಸಿಂಹ ಅವರ ವ್ಯಕ್ತಿತ್ವ ಏನು ಎಂಬದು ಜನತೆಗೆ ತಿಳಿಯುತ್ತಿದೆ ಎಂದರು.
ರಾಣಿ ಚೆನ್ನಮ್ಮ ಹಾಗೂ ಒನಕೆ ಓಬವ್ವ ಅವರಿಗೆ ಅವಮಾನ ಮಾಡಿದಾಗ ಬಿಜೆಪಿ ನಾಯಕರಾರು ಚಕಾರ ಎತ್ತಿಲ್ಲಿಲ್ಲ, ಬೇರೆ ಪಕ್ಷದವರು ಅವಮಾನ ಮಾಡಿದ್ದರೆ ಈಗಾಗಲೇ ಮುತ್ತಿಗೆ ಪ್ರತಿಭಟನೆಗಳನ್ನು ರಾಜ್ಯಾದ್ಯಂತ ಮಾಡ್ತಾ ಇದ್ರು. ಆದರೆ, ಈಗ ಬಿಜೆಪಿ ಸಂಸದ ಪ್ರಹ್ಲಾದ್ ಜೋಶಿ ಅವರು ತುಟಿ ಬಿಚ್ಚುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.
ಹಿರಿಯ ಸಂಶೋಧಕ, ಎಂ.ಎಂ. ಕಲಬುರ್ಗಿ ಅವರ ಹತ್ಯೆ ಆದಾಗಲೂ ಬಿಜೆಪಿ ಮಾತಾಡಿಲ್ಲ. ಈಗ ಚುನಾವಣೆ ಹತ್ತಿರವಾದಂತೆ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ವಿನಯ್ ಕುಲಕರ್ಣಿ ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.