ರಾಜಕೀಯ

2018 ಚುನಾವಣೆ: 2013ರಲ್ಲಿ ಸೋತಿದ್ದ 100 ಸೀಟುಗಳನ್ನೂ ಈ ಬಾರಿ ಗೆದ್ದುಕೊಳ್ಳಲು ರಾಜ್ಯ ಕಾಂಗ್ರೆಸ್ ಗುರಿ

ಮುಂಬರುವ ವಿಧಾನಸಭೆ ಚುನಾವಣೆಗೆ ಭರಪೂರ ಸಿದ್ಧತೆ ಮಾಡಿಕೊಳ್ಳುತ್ತಿರುವ ....

2018 ಚುನಾವಣೆ: 2013ರಲ್ಲಿ ಸೋತಿದ್ದ 100 ಸೀಟುಗಳನ್ನೂ ಈ ಬಾರಿ ಗೆದ್ದುಕೊಳ್ಳಲು ರಾಜ್ಯ ಕಾಂಗ್ರೆಸ್ ಗುರಿ
ಸಾಂದರ್ಭಿಕ ಚಿತ್ರ
Published On :
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಭರಪೂರ ಸಿದ್ಧತೆ ಮಾಡಿಕೊಳ್ಳುತ್ತಿರುವ ಕಾಂಗ್ರೆಸ್ ಕಳೆದ 5 ವರ್ಷಗಳಲ್ಲಿ ಸರ್ಕಾರದ ಸಾಧನೆಗಳನ್ನು ಜನತೆಗೆ ತಿಳಿಸಲು ಸಜ್ಜಾಗಿದೆ. 
ಇದೇ 13ರಿಂದ ಜಿಲ್ಲಾವಾರು ಪ್ರವಾಸ ಕೈಗೊಳ್ಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ಸರ್ಕಾರದ ಸಾಧನೆಗಳನ್ನು ಮತ್ತು ಜಿಲ್ಲೆಗಳಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. 2013ರ ಚುನಾವಣೆಯಲ್ಲಿ ಕಳೆದುಕೊಂಡ 100 ವಿಧಾನಸಭಾ ಕ್ಷೇತ್ರಗಳನ್ನು ಈ ಬಾರಿಯ ಚುನಾವಣೆಯಲ್ಲಿ ಗಳಿಸಲು ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪರಿವರ್ತನಾ ಯಾತ್ರೆಗೆ ರಾಜ್ಯದ ಜನತೆಯಿಂದ ಸಿಗುತ್ತಿರುವ ಪ್ರತಿಕ್ರಿಯೆ ಕಾಂಗ್ರೆಸ್ ಗೆ ಗಾಬರಿಯನ್ನುಂಟುಮಾಡಿದ್ದು, ಅದನ್ನು ತನ್ನ ಕಾರ್ಯತಂತ್ರ ಮತ್ತು ಯಾತ್ರೆ ಮೂಲಕ ಕುಗ್ಗಿಸಲು ಕಾಂಗ್ರೆಸ್ ತಂತ್ರ ಹೆಣೆಯುತ್ತಿದೆ.
ನಾಡಿದ್ದು 5 ರಿಂದ ಮೂರು ದಿನಗಳ ಕಾಲ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ರಾಜ್ಯದಲ್ಲಿ ತಂಗಿ ಎಲ್ಲಾ ಜಿಲ್ಲೆಗಳಲ್ಲಿ ಕೆಪಿಸಿಸಿ ವತಿಯಿಂದ ನಡೆಸುವ ಜನಾಶೀರ್ವಾದ ಯಾತ್ರೆಗೆ ಯೋಜನೆಗಳನ್ನು ಅಂತಿಮಗೊಳಿಸಲಿದ್ದಾರೆ.
ಕಾಂಗ್ರೆಸ್ ಈಗ ಅಧಿಕಾರದಲ್ಲಿರುವ ಕ್ಷೇತ್ರಗಳಲ್ಲಿ ಮಾತ್ರವಲ್ಲದೆ ಮುಂದಿನ ಚುನಾವಣೆಯಲ್ಲಿ ಕಳೆದ ಬಾರಿ ಸೋತ ಕ್ಷೇತ್ರಗಳನ್ನು ಗೆಲ್ಲುವ ತವಕ ಹೊಂದಿದೆ. ಮತದಾರರನ್ನು ಸಂಪರ್ಕಿಸುವ ಪ್ರಚಾರ, ಸಾರ್ವಜನಿಕ ಸಭೆಗಳು ಮೊದಲಾದವುಗಳನ್ನು ಕಾಂಗ್ರೆಸ್ ಹಿರಿಯ ನಾಯಕರು ನಡೆಸಲಿದ್ದಾರೆ. 
ಪ್ರತಿ ವಿಧಾನಸಭೆ ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಅವರನ್ನು ಚುನಾವಣಾ ಕಣಕ್ಕಿಳಿಸಲು ಸಿದ್ದತೆ ನಡೆಸುವುದು ಇತ್ಯಾದಿಗಳನ್ನು ಮುಂಬರುವ ದಿನಗಳಲ್ಲಿ ಬಿರುಸಿನಿಂದ ಕೈಗೊಳ್ಳಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಕಾರಿ ಸಮಿತಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗುಜರಾತ್ ಚುನಾವಣೆ ನಂತರ ರಾಜ್ಯದಲ್ಲಿ ಬೃಹತ್ ರ್ಯಾಲಿಯೊಂದನ್ನು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಡೆಸಲು ಪಕ್ಷದ ನಾಯಕರು ಯೋಜನೆ ಹಾಕಿಕೊಳ್ಳುತ್ತಿದ್ದಾರೆ. ಗುಜರಾತ್ ನಲ್ಲಿ ಚುನಾವಣಾ ರ್ಯಾಲಿ ನಡೆಸೇಕಾಗಿದ್ದರಿಂದ ಕಳೆದ ತಿಂಗಳು 19ರಂದು ಚಿಕ್ಕಮಗಳೂರಿನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸುವುದು ರದ್ದಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.