ಹಿಂದೂ ಹಬ್ಬಗಳ ಆಚರಣೆ ತಡೆಯಲು ಸಿದ್ದರಾಮಯ್ಯ 'ರಾವಣ'ನಂತಾಗಿದ್ದಾರೆ: ಅನಂತ್ ಕುಮಾರ್
ಹಿಂದೂಗಳು ಆಚರಿಸುವ ಹಬ್ಬಗಳು ಹಾಗೂ ಮೆರವಣಿಗೆಗಳನ್ನು ತಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ರಾವಣನಂತಾಗಿದ್ದಾರೆ ಎಂದು ಕೇಂದ್ರ ಸಚಿವ ಅನಂತ್...

Published On :
ಮೈಸೂರು: ಹಿಂದೂಗಳು ಆಚರಿಸುವ ಹಬ್ಬಗಳು ಹಾಗೂ ಮೆರವಣಿಗೆಗಳನ್ನು ತಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ರಾವಣನಂತಾಗಿದ್ದಾರೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಟೀಕಿಸಿದ್ದಾರೆ.
ರಾಜ್ಯದಲ್ಲಿ ಟಿಪ್ಪು ಜಯಂತಿ, ಈದ್ ಮಿಲಾದ್ ಮೆರವಣಿಗೆಗೆ ಅನುಮತಿ ನೀಡುವ ಸರ್ಕಾರವು ಹನುಮ ಜಯಂತಿ ಮೆರವಣಿಗೆಗೆ ಯಾಕೆ ಅವಕಾಶ ನೀಡುತ್ತಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ ಕೋಮು ಸೌಹಾರ್ದತೆಯನ್ನು ಕದಡಲು ಮುಖ್ಯಮಂತ್ರಿ ಅವರೇ ಮುಖ್ಯ ಕಾರಣ. ಹಿಂದೂಗಳ ಹಬ್ಬಗಳ ಆಚರಣೆಗೆ ಸಿದ್ದರಾಮಯ್ಯನವರು ರಾವಣನಂತೆ ತಯಾರಾಗಿದ್ದಾರೆ. ಹುಣಸೂರಿನಲ್ಲಿ ಹನುಮ ಜಯಂತಿಗೆ ಅನುಮತಿ ನೀಡದಿರುವುದು ಮುಖ್ಯಮಂತ್ರಿಗಳ ಸರ್ವಾಧಿಕಾರಿ ಧೋರಣೆಯೇ ಕಾರಣ ಎಂದರು.
ಇನ್ನು ಹನುಮ ಜಯಂತಿ ಮೆರವಣಿಗೆ ನಡೆಸುತ್ತಿದ್ದವರನ್ನು ಬಂಧಿಸಲಾಗಿದೆ. ಅದರಲ್ಲೂ ಸಂಸದ ಪ್ರತಾಪ್ ಸಿಂಹ ಅವರ ಬಂಧನವು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಈ ಬಗ್ಗೆ ಸಂಸತ್ ನ ಚಳಿಗಾಲದ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯAnanth kumarಅನಂತ್ ಕುಮಾರ್Pratap Simhaಪ್ರತಾಪ್ ಸಿಂಹRavanaರಾವಣHindu festivalsಹಿಂದೂ ಹಬ್ಬ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


