ರಾಜಕೀಯ

ಬಳ್ಳಾರಿಯಲ್ಲಿ ಡಿ.18ರಂದು ರಾಜ್ಯ ಸಚಿವ ಸಂಪುಟ ಸಭೆ

ಹೈದರಾಬಾದ್ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗಗಳಿಗೆ ತಮ್ಮ ಸರ್ಕಾರದ ಕೊಡುಗೆಗಳನ್ನು ....

ಬಳ್ಳಾರಿಯಲ್ಲಿ ಡಿ.18ರಂದು ರಾಜ್ಯ ಸಚಿವ ಸಂಪುಟ ಸಭೆ
ಸಾಂದರ್ಭಿಕ ಚಿತ್ರ
Published On :
ಬಳ್ಳಾರಿ: ಹೈದರಾಬಾದ್ ಕರ್ನಾಟಕ ಮತ್ತು ಉತ್ತರ ಕರ್ನಾಟಕ ಭಾಗಗಳಿಗೆ ತಮ್ಮ ಸರ್ಕಾರದ ನೀಡಿರುವ ಕೊಡುಗೆಗಳನ್ನು ಜನತೆಗೆ ತೋರಿಸಲು ಜನಾಶೀರ್ವಾದ ಯಾತ್ರೆಗೆ ಮುಂದಾಗಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಇದೇ ಮೊದಲ ಬಾರಿಗೆ ಬಳ್ಳಾರಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲಿದೆ. ಇದೇ 18ರಂದು ಸಭೆ ನಡೆಯಲಿದ್ದು ಅದಕ್ಕಾಗಿ ಭರಪೂರ ಸಿದ್ದತೆಗಳು ನಡೆಯುತ್ತಿವೆ.
ಈ ವಿಷಯವನ್ನು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ತಿಳಿಸಿದ ವೈದ್ಯಕೀಯ ಶಿಕ್ಷಣ ಸಟಿವ ಶರಣ್ ಪ್ರಕಾಶ್ ಪಾಟೀಲ್, ಇದೇ 18ರಂದು ಸಚಿವ ಸಂಪುಟ ಸಭೆ ಬಳ್ಳಾರಿಯಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿದೆ. ನನಗೆ ಇನ್ನೂ ಅಧಿಕೃತ ಆಹ್ವಾನ ಬಂದಿಲ್ಲ ಎಂದರು.
ಮೂರು ದಿನಗಳ ಹಿಂದೆಯೇ ಪ್ರಸ್ತಾವನೆ ಬಂದಿದೆ ಎನ್ನುತ್ತಾರೆ ಪ್ರವಾಸೋದ್ಯಮ ಮತ್ತು ಐಟಿ-ಬಿಟಿ ಖಾತೆ ಸಚಿವ ಪ್ರಿಯಾಂಕ್ ಖರ್ಗೆ. ಆದರೆ ಸಭೆಗೆ ನಡೆಸುವ ಸಿದ್ದತೆ ಅಥವಾ ಸ್ಥಳದ ಬಗ್ಗೆ ಅವರಲ್ಲಿ ಮಾಹಿತಿ ಇಲ್ಲವಂತೆ. ಬಳ್ಳಾರಿ ಜಿಲ್ಲಾಧಿಕಾರಿ ರಾಮ್ ಪ್ರಸಾತ್ ಮನೋಹರ್ ವಿ ಅವರಿಗೆ ಸ್ಥಳದ ಆಯ್ಕೆ ಮತ್ತು ಸಭೆಗೆ ಸಿದ್ದತೆಯ ಕೆಲಸದ ಜವಾಬ್ದಾರಿಯನ್ನು ವಹಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸುತ್ತವೆ.
ಜನಾಶೀರ್ವಾದ ಯಾತ್ರೆ ಸಂದರ್ಭದಲ್ಲಿ ಮುಖ್ಯಮಂತ್ರಿ ಹಾಗೂ ಅವರ ಸಂಪುಟದ ಕೆಲವು ಸಹೋದ್ಯೋಗಿಗಳು ಉಳಿದುಕೊಳ್ಳುವ ತೊರನಗಲ್ ಹತ್ತಿರ ವಿದ್ಯಾನಗರ ಬಳಿ ಹೊಟೇಲೊಂದರಲ್ಲಿ ಸಭೆ ನಡೆಸುವ ಬಗ್ಗೆ ಆರಂಭದಲ್ಲಿ ನಿರ್ಧಾರ ಮಾಡಲಾಗಿದ್ದರೂ ಕೂಡ ನಂತರ ಕೆಲವು ಕಾರಣಗಳಿಂದ ಸರ್ಕಾರ ಅದನ್ನು ತಿರಸ್ಕರಿಸಿತು. ಹೊಸಪೇಟೆಯಲ್ಲಿ ಸಭೆ ನಡೆಸಬಹುದೆಂದು ಬಳ್ಳಾರಿ ಜಿಲ್ಲಾಧಿಕಾರಿ ಹೇಳಿದ್ದರೂ ಕೂಡ ಇದೀಗ ತುಂಗಭದ್ರಾ ಅಣೆಕಟ್ಟು ಅತಿಥಿಗೃಹದಲ್ಲಿ ನಡೆಸಲು ನಿರ್ಧರಿಸಲಾಗಿದೆಯೆಂದು ಸರ್ಕಾರಿ ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ 17ರಂದು ಬಳ್ಳಾರಿಗೆ ತೆರಳಲಿದ್ದು, ಅಲ್ಲಿ ಕೆಲ ತಾಲ್ಲೂಕುಗಳಿಗೆ ಭೇಟಿ ನೀಡಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.