ಬಿಜೆಪಿಗೆ ಅಭಿನಂದನೆಗಳು, ಆದರೆ ನಾವು ಇನ್ನೂ ಸೋಲೊಪ್ಪುವುದಿಲ್ಲ: ರಮ್ಯಾ ಟ್ವೀಟ್
ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳ ವಿಧಾನಸಭಾ ಚುನಾವಣೆಯ ಎಣಿಕೆ ಕಾರ್ಯ ಮುಂದುವರೆದಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತದತ್ತ ಸಾಗುತ್ತಿದ್ದು, ಈ ಹಿನ್ನಲೆಯಲ್ಲಿ ನಟಿ ಹಾಗೂ ಕಾಂಗ್ರೆಸ್ ಮಾಜಿ ಸಂಸದೆ ರಮ್ಯಾ...

Published On :
ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳ ವಿಧಾನಸಭಾ ಚುನಾವಣೆಯ ಎಣಿಕೆ ಕಾರ್ಯ ಮುಂದುವರೆದಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತದತ್ತ ಸಾಗುತ್ತಿದ್ದು, ಈ ಹಿನ್ನಲೆಯಲ್ಲಿ ನಟಿ ಹಾಗೂ ಕಾಂಗ್ರೆಸ್ ಮಾಜಿ ಸಂಸದೆ ರಮ್ಯಾ ಅವರು ಬಿಜೆಪಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.
ಎರಡು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಮ್ಯಾ ಅವರು, ಬಿಜೆಪಿಗೆ ಅಭಿನಂದನೆಗಳು. ನಾವು ಇಲ್ಲಿಗೆ ಸುಲಭವಾಗಿ ಬಿಟ್ಟು ಕೊಡುವುದಿಲ್ಲ ಎಂದು ಬಿಜೆಪಿಯ ಕಾಲೆಳೆದಿದ್ದಾರೆ.
ಕಾಂಗ್ರೆಸ್ ಪೈಪೋಟಿ ನಡುವೆಯೂ ಗುಜರಾತ್ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೇರಲು ಸಕಲ ಸಿದ್ಧತೆಗಳನ್ನು ನಡೆಸಿದೆ. ಇನ್ನು ಕಾಂಗ್ರೆಸ್ ಅಧಿಕಾರದಲ್ಲಿದ್ದ ಹಿಮಾಚಲ ಪ್ರದೇಶವನ್ನು ಬಿಜೆಪಿ ತನ್ನ ತೆಕ್ಕೆಗೆ ಹಾಕಿಕೊಳ್ಳುವತ್ತ ಮುನ್ನುಗ್ಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


