ರಾಜಕೀಯ

ಮಹದಾಯಿ ವಿವಾದ ಕುರಿತ ಬಿಜೆಪಿ ಮಾತುಕತೆ ಕೇವಲ ಚುನಾವಣಾ ತಂತ್ರವಷ್ಟೇ: ಸಿಎಂ ಸಿದ್ದರಾಮಯ್ಯ

ಮಹದಾಯಿ ವಿವಾದ ಕುರಿತು ಬಿಜೆಪಿ ಭರವಸೆಗಳು ಕೇವಲ ಚುನಾವಣಾ ತಂತ್ರವಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ...

ಮಹದಾಯಿ ವಿವಾದ ಕುರಿತ ಬಿಜೆಪಿ ಮಾತುಕತೆ ಕೇವಲ ಚುನಾವಣಾ ತಂತ್ರವಷ್ಟೇ: ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Published On :
ವಿಜಯಪುರ: ಮಹದಾಯಿ ವಿವಾದ ಕುರಿತು ಬಿಜೆಪಿ ಭರವಸೆಗಳು ಕೇವಲ ಚುನಾವಣಾ ತಂತ್ರವಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. 
ಮುದ್ದೇಬಿಹಾಳ ಪಟ್ಟಣದಲ್ಲಿ ನಿನ್ನೆ ನಡೆಸ ಕಾಂಗ್ರೆಸ್ ಸಾಧನಾ ಸಮಾವೇಶಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಅನೇಕ ಬಾರಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬಳಿ ನಿಯೋಗ ತೆರಳಿ ಮಹದಾಯಿ ವಿವಾದ ಇತ್ಯರ್ಥಪಡಿಸುವಂತೆ ಮನವಿ ಮಾಡಿಕೊಂಡಿದ್ದರೂ ಈ ವರೆಗೂ ಇತ್ಯರ್ಥವಾಗಿಲ್ಲ. ಆದರೆ, ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಚುನಾವಣಾ ತಂತ್ರ ಮಾಡುತ್ತಿದ್ದಾರೆಂದು ಹೇಳಿದ್ದಾರೆ. 
ಬಳಿಕ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಅವರು, ಗೋವಾದಲ್ಲಿ ಬಿಜೆಪಿ ನಾಯಕರ ಸಭೆ ಕೇವಲ ರಾಜಕೀಯ ಕುತಂತ್ರವಷ್ಟೆ. ಗೋವಾದಲ್ಲಿ ಈ ಹಿಂದೆ ಕೂಡ ಬಿಜೆಪಿಯೇ ಅಧಿಕಾರದಲ್ಲಿತ್ತು. ಈ ಹಿಂದೆಯೇ ಇಂತಹ ಪ್ರಯತ್ನಗಳನ್ನೇಕೆ ಮಾಡಲಿಲ್ಲ? ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ವಿವಾದವನ್ನು ರಾಜಕೀಯ ಮಾಡುತ್ತಿದೆ ಎಂದು ತಿಳಿಸಿದ್ದಾರೆ. 
ಜನ ಸಾಮಾನ್ಯ ವೇದಿಕೆ ಅಧ್ಯಕ್ಷ ಡಿ. ಅಯ್ಯಪ್ಪ ಅವರು ಮಾತನಾಡಿ, ಮಹದಾಯಿ ವಿವಾದವನ್ನು ಬಗೆಹರಿಸುವ ಭರವಸೆಗಳನ್ನು ಯಡಿಯೂರಪ್ಪ ಅವರು ಬಹಳ ಹಿಂದಿನಿಂದಲೂ ಹೇಳುತ್ತಲೇ ಇದ್ದಾರೆ. ಆದರೆ, ಭರವಸೆ ಈಡೇರಿಸುವಲ್ಲಿ ಯಶಸ್ವಿಯಾಗಿಲ್ಲ. ನಿಜಕ್ಕೂ ವಿವಾದ ಬಗೆಹರಿಸಲು ಬಿಜೆಪಿ ನಾಯಕರು ಮುಂದಾಗಿರುವುದೇ ಆಗಿದ್ದರೆ, ಅದಕ್ಕೆ ಸರಿಯಾದ ದೃಢೀಕರಣ ಹಾಗೂ ನ್ಯಾಯಾಸಮ್ಮತತೆಯನ್ನು ಹೊಂದಿರಬೇಕು, ಕೇವಲ ಕಣ್ಣೀರು ಒರೆಸುವ ತಂತ್ರವಾಗಬಾರದು ಎಂದಿದ್ದಾರೆ. 
ಬಳಿಕ ಮಾತನಾಡಿರುವ ರಾಜ್ಯ ಬಿಜೆಪಿ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿಯವರು, ವಿವಾದ ಕುರಿತಂತೆ ಪಕ್ಷದ ಉನ್ನತ ನಾಯಕರೊಂದಿಗೆ ಮಾತುಕತೆಗಳು ನಡೆದಿವೆ. ಎಲ್ಲಾ ರಾಜ್ಯಗಳನ್ನು ಗಮನದಲ್ಲಿಟ್ಟುಕೊಂಡು ವಿವಾದವನ್ನು ಬಗೆಹರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.