ಬಿಜೆಪಿ, ಸಿದ್ದರಾಮಯ್ಯ ವಿರುದ್ದ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿರುವ ಹಿನ್ನಲೆಯಲ್ಲಿ ರಾಜಕೀಯ ನಾಯಕರು ಪ್ರಚಾರ ಕಾರ್ಯಗಳಲ್ಲಿ ಚುರುಕುಗೊಂಡಿದ್ದು, ಈ ನಡುವೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ನಾಯಕರ...

Published On :
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿರುವ ಹಿನ್ನಲೆಯಲ್ಲಿ ರಾಜಕೀಯ ನಾಯಕರು ಪ್ರಚಾರ ಕಾರ್ಯಗಳಲ್ಲಿ ಚುರುಕುಗೊಂಡಿದ್ದು, ಈ ನಡುವೆ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಮಹದಾಯಿ ವಿವಾದವನ್ನು ಬಗೆಹರಿಸುವ ಭರವಸೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಧನ್ಯವಾದಗಳನ್ನು ಹೇಳಿರುವ ಕುಮಾರಸ್ವಾಮಿಯವರು, ಮಹದಾಯಿ ವಿಷಯವನ್ನು ಬಳಸಿಕೊಂಡು ಬಿಜೆಪಿ ನಾಟಕವಾಡಬಾರದು ಎಂದು ಹೇಳಿದ್ದಾರೆ.
ಮಹದಾಯಿ ವಿಷಯವನ್ನು ಬಿಜೆಪಿ ರಾಜಕೀಯವಾಗಿ ಬಳಸಿಕೊಂಡು ನಾಟಕವಾಡಬಾರದು. ಶಾಶ್ವತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ಕಾರ್ಯೋನ್ಮುಖವಾಗಬೇಕು. ವಿವಾದವನ್ನು ಬಗೆಹರಿಸುವ ಬಗ್ಗೆ ಹೇಳಿಕೆ ನೀಡಲಾಗುತ್ತಿದೆ. ಕೇವಲ ತೋರಿಕೆಗೆ ಹಾಗೂ ಮತದಾರರನ್ನು ಓಲೈಸುವ ತಂತ್ರವಾಗಿ ವಿವಾದವನ್ನು ಬಿಜೆಪಿ ಬಳಸಿಕೊಳ್ಳಬಾರದು ಎಂದು ಒತ್ತಾಯಿಸಿದ್ದಾರೆ.
ಚುನಾವಣೆಗೆ 3-4 ತಿಂಗಳುಗಳಿರುವ ಸಂದರ್ಭದಲ್ಲಿ ಬಿಜೆಪಿ ನಾಯಕರು ಮಹದಾಯಿ ವಿವಾದವನ್ನು ಇತ್ಯರ್ಥಪಡಿಸುತ್ತೇವೆಂದು ಉತ್ತರ ಕರ್ನಾಟಕ ಜನತೆಗೆ ಬಿಜೆಪಿ ಭರವಸೆ ನೀಡಿದ್ದಾರೆ. ಇದಕ್ಕೆ ಬಿಜೆಪಿ ನಾಯಕರಿಗೆ ಅಭಿನಂದಿಸುತ್ತೇನೆ. ಹುಬ್ಬಳ್ಳಿಯಲ್ಲಿ ಯಡಿಯೂರಪ್ಪ ಅವರು ರ್ಯಾಲಿ ನಡೆಸುತ್ತಿದ್ದು, ಈ ರೀತಿಯ ಘೋಷಣೆಗಳು ಅನಿವಾರ್ಯ ಎಂದಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿರುವ ಅವರು, ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವ ಜಿಲ್ಲೆಯಲ್ಲಿಯೇ ಸಿದ್ದರಾಮಯ್ಯ ಅವರು ಇದ್ದರೂ ಕನಿಷ್ಠ ಸಂತ್ರಸ್ತ ಬಾಲಕಿಯ ಕುಟುಂಬಸ್ಥರ ಕುರಿತು ಸಹಾನುಭೂತಿಯನ್ನೂ ತೋರಿಸಿಲ್ಲ. ಇಂತಹ ದುರಂತ ಹಾಗೂ ಸರ್ಕಾರ ಮೌನವನ್ನು ಬಿಜೆಪಿ ತನ್ನ ಲಾಭಕ್ಕೆ ಬಳಸಿಕೊಳ್ಳಲಿದೆ ಎಂದು ತಿಳಿಸಿದ್ದಾರೆ.
ಬಳಿಕ ರ್ಯಾಲಿ ಕುರಿತು ಮಾತನಾಡಿರುವ ಅವರು, ನನ್ನನ್ನು ಹೊರತುಪಡಿಸಿ ಜೆಡಿಎಸ್'ನಲ್ಲಿರುವ ಎಲ್ಲಾ ನಾಯಕರು ಜನವರಿ ಮೊದಲ ವಾರದಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


