ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧೆ: ಸಿಎಂ ಸಿದ್ದರಾಮಯ್ಯ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ...

Published On :
ತುಮಕೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಹೆಬ್ಬಾಳ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆಂಬ ಊಹಾಪೋಹಗಳಿಗೆ ತೆರೆಎಳೆದಿರುವ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ. ಬೇರಾವುದೇ ಕ್ಷೇತ್ರದಿಂದಲೂ ನಾನು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಚುನಾವಣೆಯಲ್ಲಿ ನಾನು ಗೆಲ್ಲುವ 20 ಕ್ಷೇತ್ರಗಳಿವೆ. ಆದರೆ, ಚಾಮುಂಡೇಶ್ವರಿ ಕ್ಷೇತ್ರ ರಾಜಕೀಯದಲ್ಲಿ ನನಗೆ ಶಕ್ತಿ ಹಾಗೂ ಮರುಹುಟ್ಟು ನೀಡಿದ್ದರಿಂದಾಗಿ ನಾನು ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧೆಗಿಳಿಯಲು ನಿರ್ಧರಿಸಿದ್ದೇನೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯವಿಧಾನಸಭಾ ಚುನಾವಣೆassembly electionChamundeshwari constituencyಚಾಮುಂಡೇಶ್ವರಿ ಕ್ಷೇತ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


