ಮಹದಾಯಿ ವಿವಾದ ಬಗೆಹರಿಸುವ ಆಸಕ್ತಿ ಬಿಜೆಪಿಗಿಲ್ಲ: ಕೆ.ಸಿ ವೇಣುಗೋಪಾಲ್
ಮಹದಾಯಿ ವಿವಾದವನ್ನು ಬಗೆಹರಿಸುವ ಆಸಕ್ತಿ ಬಿಜೆಪಿಗೆ ಇಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಶುಕ್ರವಾರ ಹೇಳಿದ್ದಾರೆ...

Published On :
ಬೆಂಗಳೂರು: ಮಹದಾಯಿ ವಿವಾದವನ್ನು ಬಗೆಹರಿಸುವ ಆಸಕ್ತಿ ಬಿಜೆಪಿಗೆ ಇಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಶುಕ್ರವಾರ ಹೇಳಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಹದಾಯಿ ವಿವಾದ ಕುರಿತು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಗಂಭೀರವಾಗಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುತ್ತಿದ್ದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೇಕೆ ಪತ್ರ ಬರೆಯುತ್ತಿದ್ದರು ಎಂದು ಪ್ರಶ್ನಿಸಿದ್ದಾರೆ.
ಯಡಿಯೂರಪ್ಪ ಅವರಿಗೆ ಪರಿಕ್ಕರ್ ಅವರು ಪತ್ರ ಬರೆದಿರುವುದನ್ನು ನೋಡಿದರೆ, ಬಿಜೆಪಿಗೆ ಮಹದಾಯಿ ವಿವಾದ ಬಗೆಹರಿಸುವುದರಲ್ಲಿ ಆಸಕ್ತಿ ಇಲ್ಲ ಎಂಬುದನ್ನು ತೋರಿಸುತ್ತದೆ. ವಿವಾದವನ್ನು ಕೇವಲ ರಾಜಕೀಯಕ್ಕಷ್ಟೇ ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಕಚೇರಿ ಮುಂದೆ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಕುರಿತಂತೆ ಪ್ರತಿಕ್ರಿಯಿಸಿರುವ ಅವರು, ಪ್ರತಿಭಟನೆ ರಾಜಕೀಯ ತಂತ್ರವಷ್ಟೇ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Siddaramaiahಸಿದ್ದರಾಮಯ್ಯKarnatakaಕರ್ನಾಟಕYeddyurappaಯಡಿಯೂರಪ್ಪMahadayiಮಹದಾಯಿKC. Venugopalಕೆಸಿ. ವೇಣುಗೋಪಾಲ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


