ರಾಜ್ಯದಲ್ಲಿ ಈ ವರ್ಷವೇ ವಿಧಾನಸಭೆ ಚುನಾವಣೆ ನಡೆಯಲಿದೆ: ಎಚ್ ಡಿಕೆ ಭವಿಷ್ಯ
ರಾಜ್ಯದಲ್ಲಿ ಅಧಿಕಾರದಲ್ಲಿುವ ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಪೂರೈಸುವುದಿಲ್ಲ, ಹೀಗಾಗಿ ರಾಜ್ಯದಲ್ಲಿ ಈ ವರ್ಷವೇ ವಿಧಾನಸಭೆ ಚುನಾವಣೆ ನಡೆಯಲಿದೆ ...

ಬೆಂಗಳೂರು: ರಾಜ್ಯದಲ್ಲಿ ಅಧಿಕಾರದಲ್ಲಿುವ ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಪೂರೈಸುವುದಿಲ್ಲ, ಹೀಗಾಗಿ ರಾಜ್ಯದಲ್ಲಿ ಈ ವರ್ಷವೇ ವಿಧಾನಸಭೆ ಚುನಾವಣೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಬಿಗ್ ಬಾಸ್ ವಿನ್ನರ್ ಪ್ರಥಮ್ ಭೇಟಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಂಜನಗೂಡು ವಿಧಾನಸಭೆ ಚುನಾವಣೆಯಲ್ಲಿ ಹೋರಾಡುವ ಶಕ್ತಿ ಕಾಂಗ್ರೆಸ್ ಗಿಲ್ಲ, ಹೀಗಾಗಿ ಜೆಡಿಎಸ್ ಅಭ್ಯರ್ಥಿ ಕಳಲೆ ಕೇಶವಮೂರ್ತಿ ಅವರನ್ನು ಮೋಸದಿಂದ ಪಕ್ಷಕ್ಕೆ ಸೆಳೆದುಕೊಂಡು ಅಭ್ಯರ್ಥಿಯನ್ನಾಗಿಸಲು ಪ್ರಯತ್ನಿಸುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.
ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಬೆಳವಣಿಗೆ ನೋಡಿದರೇ ನನಗೆ ಅಯ್ಯೋ ಎನಿಸುತ್ತದೆ ಎಂದು ಹೇಳಿರುವ ಎಚ್ ಡಿಕೆ ಮುಂದಿನ ಏಳೆಂಟು ತಿಂಗಳಲ್ಲಿ ರಾಜ್ಯದಲ್ಲಿ ವಿಧಾನಸಭೆ ನಡೆಯಬಹುದು ಎಂದು ಭವಿಷ್ಯ ನುಡಿದಿದ್ದಾರೆ.
ಗುಜರಾತ್ ಚುನಾವಣೆ ಜೊತೆಯೇ ರಾಜ್ಯದಲ್ಲೂ ವಿಧಾನಸಭೆ ನಡೆಯಲಿದೆ ಎಂದು ನನ್ನ ಪಕ್ಷದ ಕಾರ್ಯಕರ್ತರಿಗೆ ಹೇಳಿರುವುದಾಗಿ ತಿಳಿಸಿದ ಕುಮಾರಸ್ವಾಮಿ,ಎಸ್ ಎಂ ಕೃಷ್ಣ ಕಾಂಗ್ರೆಸ್ ತೊರೆದ ನಂತರ ಪೈಪೋಟಿಗೆ ಬಿದ್ದಂತೆ ಬಿಜೆಪಿ ಕೃಷ್ಣ ಅವರನ್ನುಆಹ್ವಾನಿಸುತ್ತಿದೆ. ಮುಂದಿನ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುತ್ತೇನೆ ಎಂದು ಬಿಜೆಪಿ ಹೇಳಿಕೊಳ್ಳುತ್ತಿದೆ. ಕೃಷ್ಣ ಬಂದರೆ ಪಕ್ಷದ ಶಕ್ತಿ ಮತ್ತಷ್ಟು ಹೆಚ್ಚಲಿದೆ ಎಂದು ಬಿಜೆಪಿ ಹೇಳುತ್ತಿದೆ, ಆದರೆ ತನ್ನ ಪಕ್ಷದ ಹಿರಿಯ ನಾಯಕರಾದ ಎಲ್ ಕೆ ಅಡ್ವಾಣಿ ಅವರನ್ನೇ ಬಿಜೆಪಿ ಮೂಲೆಗುಂಪು ಮಾಡಿದೆ ಎಂದು ಲೇವಡಿ ಮಾಡಿದ್ದಾರೆ. ಯಾವುದೇ ಕಾಂಗ್ರೆಸ್ ನ ಯಾವುದೇ ನಾಯಕರು ಪಕ್ಷಕ್ಕೆ ಸೇರುವ ಪ್ರಸ್ತಾವನೆ ತಮಗೆ ಬಂದಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


