ಸಿಡಿ ವಿವಾದ: ಮೂವರು ಸಚಿವರ ವಿರುದ್ಧ ಪೊಲೀಸ್ ಆಯುಕ್ತರಿಗೆ ಬಿಜೆಪಿ ದೂರು
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್ ನಡುವಿನ ಸಂಭಾಷಣೆಯ ಸಿ.ಡಿ ಪ್ರಕರಣದ ಸಂಬಂಧ ಮೂವರು ಸಚಿವರ ವಿರುದ್ಧ ...

Published On :
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಅನಂತ್ ಕುಮಾರ್ ನಡುವಿನ ಸಂಭಾಷಣೆಯ ಸಿ.ಡಿ ಪ್ರಕರಣದ ಸಂಬಂಧ ಮೂವರು ಸಚಿವರ ವಿರುದ್ಧ ಬಿಜೆಪಿ ದೂರು ದಾಖಲಿಸಿದೆ.
ವಿಧಾನಪರಿಷತ್ ಸದಸ್ಯ ವಿ. ಸೋಮಣ್ಣ ನೇತೃತ್ವದಲ್ಲಿ ಬಿಜೆಪಿ ನಿಯೋಗ ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಅವರನ್ನು ಭೇಟಿ ಮಾಡಿ ದಾಖಲೆಗಳನ್ನು ತಿದ್ದಿ ಸಾಕ್ಷ್ಯ ಸೃಷ್ಟಿಸಿರುವ ಸಚಿವರಾಜ ಬಸವರಾಯರೆಡ್ಜಿ, ರಮೇಶ್ ಕುಮಾರ್, ಮತ್ತು ವಿ,ಎಸ್ ಉಗ್ರಪ್ಪ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬಿಜೆಪಿ ಶಾಸಕರು ಸಲ್ಲಿಸಿರುವ ಮನವಿ ಆಧಾರದ ಮೇಲೆ ಸತ್ಯಾಸತ್ಯತೆಗಳನ್ನು ಪರಿಶೀಲಿಸಲಾಗುವುದು, ಇದುವರೆಗೂ ಯಾವುದೇ ಎಫ್ ಐ ಆರ್ ದಾಖಲಿಸಿಲ್ಲ, ಸಾಕ್ಷ್ಯಗಳನ್ನು ಪರಿಶೀಲಿಸಿ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದು ಪ್ರವೀಣ್ ಸೂದ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


