ರಾಜಕೀಯ

ಮತ್ತಷ್ಟು ಸ್ಫೋಟಕ ಮಾಹಿತಿ ಶೀಘ್ರವೇ ಬಹಿರಂಗ: ಯಡಿಯೂರಪ್ಪ ಬೆದರಿಕೆ

ಪಕ್ಷದ ಹೈ ಕಮಾಂಡ್ ಗೆ ಕಿಕ್ ಬ್ಯಾಕ್ ನೀಡಿರುವವರ ಹಲವು ಹೆಸರುಗಳು ಮಾಧ್ಯಮಗಳಿಗೆ ಡೈರಿಯಿಂದ ಬಹಿರಂಗ ಗೊಂಡ ನಂತರ, ಸಿಎಂ ಸಿದ್ದರಾಮಯ್ಯ ವಿರುದ್ಧ ...

ಮತ್ತಷ್ಟು ಸ್ಫೋಟಕ ಮಾಹಿತಿ ಶೀಘ್ರವೇ ಬಹಿರಂಗ: ಯಡಿಯೂರಪ್ಪ ಬೆದರಿಕೆ
ಬಿ.ಎಸ್ ಯಡಿಯೂರಪ್ಪ
Published On :

ಬೆಂಗಳೂರು: ಪಕ್ಷದ ಹೈ ಕಮಾಂಡ್ ಗೆ ಕಿಕ್ ಬ್ಯಾಕ್ ನೀಡಿರುವವರ ಹಲವು ಹೆಸರುಗಳು ಮಾಧ್ಯಮಗಳಿಗೆ ಡೈರಿಯಿಂದ ಬಹಿರಂಗ ಗೊಂಡ ನಂತರ, ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತಷ್ಟು ಸ್ಫೋಟಕ ಮಾಹಿತಿ ಬಹಿರಂಗ ಪಡಿಸುವುದಾಗಿ ಬಿ.ಎಸ್ ಯಡಿಯೂರಪ್ಪ ಬೆದರಿಕೆ ಹಾಕಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಯಡಿಯೂರಪ್ಪ ಕೂಡಲೇ ಸಿಎಂ ರಾಜೀನಾಮೆ ನೀಡಬೇಕು, ಜೊತೆಗೆ ವಿಧಾನಸಭೆ ವಿಸರ್ಜಿಸಬೇಕು ಎಂದು ಆಗ್ರಹಿಸಿದ್ದಾರೆ.

ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ಮತ್ತೆ ಚುನಾವಣೆಗೆ ತೆರಳಿ ತಮ್ಮ ನೈತಿಕ ಆದರ್ಶಗಳಿಂದ ಸಿಎಂ ಸಿದ್ದರಾಮಯ್ಯ ಸ್ಪಷ್ಟ ಜನಾದೇಶ ಪಡೆಯಲಿ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಮುಂದಿನ ಮೂರು ನಾಲ್ಕು ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮತ್ತಷ್ಟು ರಹಸ್ಯಗಳನ್ನು ಬಹಿರಂಗ ಪಡಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಗೆ ಕಪ್ಪ ನೀಡಿರುವ ವಿಷಯವನ್ನು ನಾನು ಬಹಿರಂಗ ಪಡಿಸಿದ್ದಕ್ಕೆ ಕಾಂಗ್ರೆಸ್ ಪಕ್ಷದ ನಾಯಕರು ನನ್ನನ್ನು ಟೀಕಿಸಿದರು. ಆದರೆ ಡೈರಿಯಲ್ಲಿ ನೀಡಿರುವ ಹಣದ ಬಗ್ಗೆ ಉಲ್ಲೇಖ ಇರುವುದರಿಂದ ಅವರೆಲ್ಲಾ ಸತ್ಯ ಒಪ್ಪಿಕೊಳ್ಳೂಬೇಕಾದ ಪರಿಸ್ಥಿತಿ ಬಂದಿದೆ ಎಂದು ಟೀಕಿಸಿದ್ದಾರೆ.

ಇನ್ನೂ ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಸಿಎಂ ಎಚ್.ಡಿ ಕುಮಾರ ಸ್ವಾಮಿ ಎರಡು ರಾಷ್ಟ್ರೀಯ ಪಕ್ಷಗಳು ರಾಜ್ಯವನ್ನು ಲೂಟಿ ಮಾಡಿವ ಎಂದು ಆರೋಪಿಸಿದ್ದಾರೆ.

ಬಿಜೆಪಿ ಅವರು ಏನೂ ಕಡಿಮೆಯಿಲ್ಲ ಅವರು ಕೂಡ ತಮ್ಮನ ಪಕ್ಷದ ಹೈಕಮಾಂಡ್ ಗೆ ಕಪ್ಪ ನೀಡುತ್ತಾರೆ ಎಂದು ದೂರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.