ರಾಜಕೀಯ

ಕೈ ಪಾಳಯದ ಮತ್ತೊಂದು ವಿಕೆಟ್ ಪತನ; ಕುಮಾರ್ ಬಂಗಾರಪ್ಪ ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ ಸಾಧ್ಯತೆ

ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಕುಮಾರ್ ಬಂಗಾರಪ್ಪ ಶೀಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.

ಕೈ ಪಾಳಯದ ಮತ್ತೊಂದು ವಿಕೆಟ್ ಪತನ; ಕುಮಾರ್ ಬಂಗಾರಪ್ಪ ಶೀಘ್ರದಲ್ಲೇ ಬಿಜೆಪಿ ಸೇರ್ಪಡೆ ಸಾಧ್ಯತೆ
ಸಂಗ್ರಹ ಚಿತ್ರ
Published On :

ಶಿವಮೊಗ್ಗ: ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಕುಮಾರ್ ಬಂಗಾರಪ್ಪ ಶೀಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.

ಖಾಸಗಿ ಮಾಧ್ಯಮವೊಂದು ವರದಿ ಮಾಡಿರುವಂತೆ ಶಿವಮೊಗ್ಗದ ಕಾಂಗ್ರೆಸ್ ಮುಖಂಡರಾದ ಕುಮಾರ್ ಬಂಗಾರಪ್ಪ ಬಿಜೆಪಿ ಸೇರ್ಪಡೆಗೆ ಸಿದ್ಧರಾಗಿದ್ದು, ಶೀಘ್ರದಲ್ಲೇ ಈ ಬಗ್ಗೆ ಸುದ್ದಿಗೋಷ್ಠಿ ಕರೆದು ಮಾಹಿತಿ ನೀಡಲಿದ್ದಾರೆ ಎಂದು  ವರದಿ ಮಾಡಿದೆ. ಇಂದು ಮಾಜಿ ಸಿಎಂ ಹಾಗೂ ಹಾಲಿ ಬಿಜೆಪಿ ರಾಜ್ಯಾಧ್ಯ ಬಿಎಸ್ ಯಡಿಯೂರಪ್ಪ ಅವರ ಜನ್ಮ ದಿನಾಚರಣೆ ಪ್ರಯುಕ್ತ ಅವರ ನಿವಾಸಕ್ಕೆ ತೆರಳಿದ್ದ ಕುಮಾರ್ ಬಂಗಾರಪ್ಪ ಅವರು ಯಡಿಯೂರಪ್ಪ ಅವರಿಗೆ ಶುಭ  ಕೋರಿದ್ದಾರೆ.

ಈ ವೇಳೆ ಮಾತನಾಡಿದ ಅವರು ಬಿಎಸ್ ಯಡಿಯೂರಪ್ಪ ಶಿವಮೊಗ್ಗ ಜಿಲ್ಲೆಯ ಪ್ರಭಾವಿ ನಾಯಕರಾಗಿದ್ದು, ಅವರೊಡನೆ ಕೆಲಸ ಮಾಡಲು ಉತ್ಸುಕನಾಗಿದ್ದೇನೆ. ಹೀಗಾಗಿ ಈ ಬಗ್ಗೆ ಶೀಘ್ರದಲ್ಲೇ ಸುದ್ದಿಗೋಷ್ಠಿ ಕರೆದು ಮಾಹಿತಿ  ನೀಡುತ್ತೇನೆ ಎಂದು ಕುಮಾರ್ ಬಂಗಾರಪ್ಪ ಹೇಳಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಈ ಹಿಂದಷ್ಟೇ ಸಚಿವ ಸ್ಥಾನ ಕಳೆದುಕೊಂಡಿದ್ದ ನಂಜನಗೂಡು ಶಾಸಕ ಹಾಗೂ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಇದಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ  ಸಚಿವ ಎಸ್ ಎಂ ಕೃಷ್ಣ ಕೂಡ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.