ರಾಯಣ್ಣ ಬ್ರಿಗೇಡ್ ಕಲಹ: ಅಮಿತ್ ಶಾ ಮಧ್ಯ ಪ್ರವೇಶವಿಲ್ಲ- ಅರವಿಂದ ಲಿಂಬಾವಳಿ ಸ್ಪಷ್ಟನೆ
ಕಮಲ ಪಾಳ್ಯದಲ್ಲಿ ರಾಯಣ್ಣ ಬ್ರಿಗೇಡ್ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಪಕ್ಷದಲ್ಲಿ ಉಂಟಾಗಿರುವ ಕಲಹದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತಾ ಶಾ ಅವರು ಮಧ್ಯೆ ಪ್ರವೇಶ ಮಾಡುವುದಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ...

ಬೆಂಗಳೂರು: ಕಮಲ ಪಾಳ್ಯದಲ್ಲಿ ರಾಯಣ್ಣ ಬ್ರಿಗೇಡ್ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಪಕ್ಷದಲ್ಲಿ ಉಂಟಾಗಿರುವ ಕಲಹದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತಾ ಶಾ ಅವರು ಮಧ್ಯೆ ಪ್ರವೇಶ ಮಾಡುವುದಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿಯವರು ಶನಿವಾರ ಸ್ಪಷ್ಟಪಡಿಸಿದ್ದಾರೆ.
ಕಲಬುರ್ಗಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಸಭೆ ವೇಳೆ ಎರಡೂ ಬಣಗಳಿಂದಲೂ ಭಿನ್ನತಾ ಹೇಳಿಕೆಗಳು ಬಂದಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಯಡಿಯೂರಪ್ಪ ಅವರನ್ನಾಗಲೀ, ಕೆ.ಎಸ್. ಈಶ್ವರಪ್ಪ ಅವರನ್ನಾಗಲಿ ಭೇಟಿಯಾಗಿ ಮಾತುಕತೆ ನಡೆಸುವ ಸಂಭವಗಳಿಲ್ಲ ಎಂದು ಹೇಳಿದ್ದಾರೆ.
ಪದಾಧಿಕಾರಿಗಳ ಪಟ್ಟಿಯಲ್ಲಿ ಯಾವುದೇ ಬದಲಾವಣೆಗಳು ಬಂದರೂ ಅಂತಿಮವಾಗಿ ಪಟ್ಟಿಯನ್ನು ಅಮಿತ್ ಶಾ ಅವರೇ ಅಂತಿಮಗೊಳಿಸಲಿದ್ದಾರೆಂದು ತಿಳಿಸಿದ್ದಾರೆ. ಇದೇ ವೇಳೆ ರಾಯಣ್ಣ ಬ್ರಿಗೇಡ್ ನಲ್ಲಿ ಭಾಗಿಯಾದ ಬಿಜೆಪಿ ನಾಯಕರ ವಿರುದ್ದ ಪಕ್ಷ ಕ್ರಮಕೈಗೊಳ್ಳಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಭಾನುವಾರ ನಡೆಯಲಿರುವ ಕಾರ್ಯಕಾರಿಣಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ. ಈಶ್ವರಪ್ಪ ಅವರೂ ಕೂಡ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


