ರಾಜಕೀಯ

ಐಟಿ ದಾಳಿ ಪ್ರಕರಣ: ರಮೇಶ್, ಲಕ್ಷ್ಮಿ ಹೆಬ್ಬಾಳ್ಕರ್ ರಿಂದ ವಿವರಣೆ ಕೇಳಿದ ಪರಮೇಶ್ವರ್

162 ಕೋಟಿ ರು. ಬೇನಾಮಿ ಆಸ್ತಿ ಪ್ರಕರಣ ಸಂಬಂಧ ಸಣ್ಣ ಕೈಗಾರಿಕಾ ಸಚಿವ ರಮೇಶ್ ಜಾರಕಿ ಹೊಳಿ ಹಾಗೂ ಪ್ರದೇಶ ಕಾಂಗ್ರೆಸ್ ಮಹಿಳಾ ರಾಜ್ಯ ಅಧ್ಯಕ್ಷೆ...

ಐಟಿ ದಾಳಿ ಪ್ರಕರಣ: ರಮೇಶ್, ಲಕ್ಷ್ಮಿ ಹೆಬ್ಬಾಳ್ಕರ್ ರಿಂದ ವಿವರಣೆ ಕೇಳಿದ ಪರಮೇಶ್ವರ್
ಲಕ್ಷ್ಮಿ ಹೆಬ್ಬಾಳ್ಕರ್ , ಸಿದ್ದರಾಮಯ್ಯ, ಮತ್ತು ಜಿ ಪರಮೇಶ್ವರ್
Published On :

ಬೆಂಗಳೂರು: 162 ಕೋಟಿ ರು. ಬೇನಾಮಿ ಆಸ್ತಿ ಪ್ರಕರಣ ಸಂಬಂಧ ಸಣ್ಣ ಕೈಗಾರಿಕಾ ಸಚಿವ ರಮೇಶ್ ಜಾರಕಿ ಹೊಳಿ ಹಾಗೂ ಪ್ರದೇಶ ಕಾಂಗ್ರೆಸ್ ಮಹಿಳಾ ರಾಜ್ಯ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಂದ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ವಿವರಣೆ ಕೇಳಿದ್ದಾರೆ.

ಇತ್ತೀಚೆಗೆ ಕಾಂಗ್ರೆಸ್ ಮುಖಂಡ, ಸಚಿವ ರಮೇಶ್ ಜಾರಕಿಹೊಳಿ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 162 ಕೋಟಿ ರು. ಆಸ್ತಿ, 41 ಲಕ್ಷ ನಗದು ಹಾಗೂ 12 ಕೆಜಿ ಗೂ ಹೆಚ್ಚಿನಿ ಚಿನ್ನಾಭರಣ ಜಪ್ತಿ ಮಾಡಿದ್ದರು.  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಗೆ ದೂರವಾಣಿ ಕರೆ ಮಾಡಿ ಮಾಹಿತಿ ಪಡೆದಿದ್ದಾರೆ ಎಂದು ಹೇಳಲಾಗಿದೆ.

ಈ ಇಬ್ಬರು ಮುಖಂಡರು ತೆರಿಗೆ ವಂಚಿಸಿ, ಬೆಳಗಾವಿ ಮತ್ತು ಗೋಕಾಕ್ ನಲ್ಲಿ ಹಣ ಹೂಡಿಕೆ ಮಾಡಿದ್ದರು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಂಗ್ರೆಸ್ ಮುಖಂಡರ ಮನೆ ಮೇಲೆ ನಡೆದಿರುವ ಐಟಿ ದಾಳಿ ರಾಜಕೀಯ ಪ್ರೇರಿತವಾದದ್ದು. ಇದೆಲ್ಲಾ ವಿರೋಧ ಪಕ್ಷ ಹಾಗೂ ನರೇಂದ್ರ ಮೋದಿ ಸರ್ಕಾರದ ಕುತಂತ್ರ ಎಂದು ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.