ರಾಜಕೀಯ

ಎಸ್.ಎಂ.ಕೃಷ್ಣರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಆಸಕ್ತಿ ಇಲ್ಲ: ದೇವೇಗೌಡ

ಇತ್ತೀಚಿಗಷ್ಟೇ ಕಾಂಗ್ರೆಸ್ ತೊರೆದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರನ್ನು ನಮ್ಮ ಪಕ್ಷಕ್ಕೆ...

ಎಸ್.ಎಂ.ಕೃಷ್ಣರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಆಸಕ್ತಿ ಇಲ್ಲ: ದೇವೇಗೌಡ
ದೇವೇಗೌಡ
Published On :
ಹುಬ್ಬಳ್ಳಿ: ಇತ್ತೀಚಿಗಷ್ಟೇ ಕಾಂಗ್ರೆಸ್ ತೊರೆದ ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರನ್ನು ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಆಸಕ್ತಿ ಇಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಸೋಮವಾರ ಹೇಳಿದ್ದಾರೆ.
ಕೃಷ್ಣ ಅವರು ಕಾಂಗ್ರೆಸ್ ಗೆ ರಾಜಿನಾಮೆ ನೀಡಿದ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ, ಅವರ ತಲೆಯಲ್ಲಿ ಏನಿದೆ ಅಂತ ನನಗೆ ಗೊತ್ತಿಲ್ಲ. ಪಕ್ಷ ತೊರೆಯಲು ಕಾರಣ ಏನು ಅಂತ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ ಒಬ್ಬ ಹಿರಿಯ ರಾಜಕಾರಣಿಯಾಗಿರುವುದರಿಂದ ಭವಿಷ್ಯದ ಬಗ್ಗೆ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದಾರೆ ಎಂದರು.
ನೀವು ಜೆಡಿಎಸ್ ಗೆ ಆಹ್ವಾನ ನೀಡುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ದೇವೇಗೌಡರು, ಈವರೆಗೂ ಅಂತಹ ಯಾವುದೇ ವಿಚಾರ ಬಂದಿಲ್ಲ ಮತ್ತು ಪಕ್ಷ ಸೇರುವಂತೆ ನಾನು ಅವರಿಗೆ ಯಾವುದೇ ಆಹ್ವಾನ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ಮಹಾದಾಯಿ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ದೇವೇಗೌಡರು, ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ನಮ್ಮ ಪಕ್ಷ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಿದೆ. ಸಂದರ್ಭ ಬಂದರೆ ನಾನು ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಕಚೇರಿ ಮುಂದೆ ಧರಣಿ ಮಾಡಲು ಹಿಂದೇಟು ಹಾಕುವುದಿಲ್ಲ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.