ಕೋವಿಂದ್ ಭೇಟಿಗೆ ನಿರಾಕರಣೆ: ಕೋಲಿ ಜನಾಂಗದ ಮುಖಂಡರಿಂದ ಅರಂವಿಂದ್ ಲಿಂಬಾವಳಿಗೆ ಮುತ್ತಿಗೆ
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಹದೇವಪುರ ಕ್ಷೇತ್ರದ ಶಾಸಕ ಅರವಿಂದ್ ಲಿಂಬಾವಳಿ ಅವರಿಗೆ ಕೋಲಿ......

Published On :
ಬೆಂಗಳೂರು: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಹದೇವಪುರ ಕ್ಷೇತ್ರದ ಶಾಸಕ ಅರವಿಂದ್ ಲಿಂಬಾವಳಿ ಅವರಿಗೆ ಕೋಲಿ ಸಮಾಜದ ಮುಖಂಡರು ಮುತ್ತಿಗೆ ಹಾಕಿದ ಘಟನೆ ಬುಧವಾರ ಬೆಂಗಳೂರಿನ ಏಟ್ರಿಯಾ ಹೋಟೆಲ್ ನಲ್ಲಿ ನಡೆದಿದೆ.
ಎನ್ ಡಿಎ ರಾಷ್ಟ್ರಪತಿ ಅಭ್ಯರ್ತಿ ರಾಮನಾಥ್ ಕೋವಿಂದ್ ಅವರು ಇಂದು ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದು, ಏಟ್ರಿಯಾ ಹೋಟೆಲ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮತಯಾಚನೆ ಮಾಡಿದರು.
ಈ ವೇಳೆ ವೇಳೆ ರಾಮನಾಥ್ ಕೋವಿಂದ್ ಅವರಿಗೆ ಹೂಗುಚ್ಛ ನೀಡಲು ಅವಕಾಶ ನೀಡುವಂತೆ ಕೋಲಿ ಸಮಾಜದ ಮುಖಂಡರು ಮನವಿ ಮಾಡಿದ್ದರು. ಆದರೆ ಅವರ ಮನವಿಯನ್ನು ಅರವಿಂದ್ ಲಿಂಬಾವಳಿ ಅವರು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕೋಲಿ ಸಮಾಜದ ಮುಖಂಡರು ಬಿಜೆಪಿ ಶಾಸಕನಿಗೆ ಮುತ್ತಿಗೆ ಹಾಕಿ ಹಲ್ಲೆಗೆ ಯತ್ನಿನಿಸಿದರು. ಆದರೆ ತಕ್ಷಣ ಅರವಿಂದ್ ಲಿಂಬಾವಳಿ ನೆರವಿಗೆ ಬಂದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


