ರಾಜಕೀಯ

2018ರ ವಿಧಾನಸಭೆ ಚುನಾವಣೆ: ಚನ್ನಪಟ್ಟಣ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ .ಡಿ ಕುಮಾರಸ್ವಾಮಿ ಪತ್ನಿ ಅನಿತಾ ...

2018ರ ವಿಧಾನಸಭೆ ಚುನಾವಣೆ: ಚನ್ನಪಟ್ಟಣ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆ
ಅನಿತಾ ಕುಮಾರಸ್ವಾಮಿ
Published On :
ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ .ಡಿ ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ  ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಆಯೋಜಿಸಿದ್ದ ಜೆಡಿಎಸ್ ಅಲ್ಪಸಂಖ್ಯಾಂತರ ಘಟಕದ ಪದಾಧಿಕಾರಿಗಳ ನೇಮಕ ಮತ್ತು ಕಾಂಗ್ರೆಸ್ ಮುಖಂಡರು, ಯುವಕರ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚನ್ನಪಟ್ಟಣದಿಂದ ಸ್ಪರ್ಧಿಸುವಂತೆ ಇಲ್ಲಿನ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ಮೇಲೆ ಒತ್ತಡ ಹಾಕುತ್ತಿದ್ದಾರೆ. ಅವರ ಆಶಯದಂತೆ ಇಲ್ಲಿ ಸ್ಪರ್ಧಿಸಿ  ಅಭಿವೃದ್ಧಿಗೆ ಶ್ರಮಿಸುವ ತೀರ್ಮಾನ ಮಾಡಿದ್ದೇನೆ ಎಂದು ಹೇಳಿದ್ದಾರೆ. 
ರಾಜ್ಯದಲ್ಲಿ ಜೆಡಿಎಸ್ ಅಧಿಕಾರ ಹಿಡಿಯುವುದು ಖಚಿತ. ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಗಳಾಗಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಲು ಪಣತೊಟ್ಟಿದ್ದಾರೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು. ಇನ್ನು ಚನ್ನಪಟ್ಟಣದಲ್ಲಿ ವಾಸ್ತವ್ಯ ಹೂಡಲು ಅನಿತಾ ಕುಮಾರ ಸ್ವಾಮಿ ನಿರ್ಧರಿಸಿದ್ದು, ಜೆಡಿಎಸ್ ಮುಖಂಡರು ಅವರಿಗಾಗಿ ಸೂಕ್ತ ಮನೆಯ ಹುಡುಕಾಟದಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.