ರಾಹುಲ್ ಗಾಂಧಿ ಒಬ್ಬ ಬಚ್ಚಾ, ಪ್ರಧಾನಿ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಶೋಭಾ ಕರಂದ್ಲಾಜೆ
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಬಚ್ಚಾ, ಅವರಿಗೆ ದೇಶದ ಪ್ರಧಾನಿ ಬಗ್ಗೆ ಟೀಕೆ ಮಾಡುವ ನೈತಿಕ ಹಕ್ಕಿಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು ...

Published On :
ಕಲಬುರಗಿ: ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಬಚ್ಚಾ, ಅವರಿಗೆ ದೇಶದ ಪ್ರಧಾನಿ ಬಗ್ಗೆ ಟೀಕೆ ಮಾಡುವ ನೈತಿಕ ಹಕ್ಕಿಲ್ಲ, ಅವರಿಂದ ಪ್ರಧಾನಿ ಅವರು ಕಲಿಯುವುದು ಏನು ಇಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ.
ನಿನ್ನೆ ರಾಹುಲ್ ಗಾಂಧಿ ಅವರು ಮೋದಿ ಒಬ್ಬ ದುರ್ಬಲ ಪ್ರಧಾನಿ ಎಂದು ನೀಡಿರುವ ಹೇಳಿಕೆ ಸಂಬಂಧ ಪ್ರತಿಕ್ರಿಯಿಸಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಯಿಂದ ಇಡೀ ಪ್ರಪಂಚವೇ ಇಂದು ಭಾರತದತ್ತ ತಿರುಗಿ ನೋಡುತ್ತಿದೆ. ಅವರ ಬಗ್ಗೆ ರಾಹುಲ್ ಗಾಂಧಿಯಂತಹ ಒಬ್ಬ ಬಚ್ಚಾ ಗೆ ಟೀಕಿಸುವ ಹಕ್ಕಿಲ್ಲ ಎಂದು ಕಿಡಿಕಾರಿದ್ದಾರೆ. ಮೊದಲು ಸಿದ್ದರಾಮಯ್ಯ ಅವರ ಜೊತೆ ಮಾತನಾಡಿ ರಾಜ್ಯದ ರೈತರ ಸಮಸ್ಯೆ ಬಗೆಹರಿಸಲಿ ಎಂದು ಆಗ್ರಹಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಮೆರಿಕದಲ್ಲಿ ಹೇಗೆ ಸ್ವಾಗತಿಸಿ ಗೌರವ ನೀಡಲಾಯಿತು ಎನ್ನುವುದನ್ನು ವಿಶ್ವವೇ ನೋಡಿದೆ. ಅವರು 70 ವರ್ಷಗಳಲ್ಲಿ ಇಸ್ರೇಲ್ ಪ್ರವಾಸ ಮಾಡುವ ಎದೆಗಾರಿಕೆ ತೋರಿಸಿದ್ದಾರೆ. ಗಡಿ ರಕ್ಷಣೆ, ಸಶಸ್ತ್ರ ಸ್ವಾವಲಂಬನೆ ಮಾಡುವತ್ತ ಹೊರಟಿದ್ದಾರೆ ಎಂದು ಮೋದಿಯನ್ನು ಶ್ಲಾಘಿಸಿದ ಶೋಭಾ, ಮೊದಲು ಕಾಂಗ್ರೆಸ್ ಪಕ್ಷದಲ್ಲಿರುವ ಹುಳುಕನ್ನು ಸರಿಪಡಿಸಲಿ ಎಂದು ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


