ಯೂಟರ್ನ್ ಹೊಡೆದ ಸುಧಾಕರ್: ರಾಜಿನಾಮೆ ನಿರ್ಧಾರದಿಂದ ಹಿಂದೆ ಸರಿದ ಶಾಸಕ
ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ರೆಡ್ಡಿ ಹಿರಿಯ ನಾಯಕರ ಮನವೊಲಿಕೆ ನಂತರ ರಾಜಿನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ....

Published On :
ಚಿಕ್ಕಬಳ್ಳಾಪುರ: ರಾಜಿನಾಮೆ ನೀಡುವುದಾಗಿ ಘೋಷಿಸಿದ್ದ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ರೆಡ್ಡಿ ಹಿರಿಯ ನಾಯಕರ ಮನವೊಲಿಕೆ ನಂತರ ರಾಜಿನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡುರಾವ್ ಸುಧಾಕರ್ ಅವರ ಮನವೊಲಿಕೆ ನಂತರ ರಾಜಿನಾಮೆ ನೀಡುವುದಿಲ್ಲ ಎಂದು ಸುಧಾಕರ್ ಘೋಷಿಸಿದ್ದಾರೆ. ವಯಕ್ತಿಕ ವಿಚಾರಗಳನ್ನ ಬದಿಗೊತ್ತಿ ಪಕ್ಷ, ಸಮಾಜದ ಹಿತಾಸಕ್ತಿಯಿಂದ ನಿರ್ಧಾರ ಹಿಂಪಡೆದಿದ್ದಾಗಿ ತಿಳಿಸಿದ್ದಾರೆ
ನಿನ್ನೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಸುಧಾಕರ್ ರೆಡ್ಡಿ ಅವರ ತಂದೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾಗಿರುವ ಕೇಶವ್ ರೆಡ್ಡಿ ಪದಚ್ಯುತಿಗೆ ಒತ್ತಾಯ ಕೇಳಿಬಂದಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಸುಧಾಕರ್ ರೆಡ್ಡಿ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಟ್ವೀಟ್ ಮಾಡಿದ್ದರು. ತಮ್ಮ ಚಾರಿತ್ರ್ಯ ವಧೆ ಮಾಡುತ್ತಿದ್ದಾರೆಂದು ಸುಧಾಕರ್ ಆರೋಪಿಸಿದ್ದರು. ನನ್ನ ತಂದೆ 2 ಬಾರಿ ಜಿ,ಪಂ ಅಧ್ಯಕ್ಷರಾಗಿದ್ದಾರೆ. ಸ್ವಪಕ್ಷದವರಿಂದಲೇ ರಾಜಕೀಯವಾಗಿ ತುಳಿಯುವ ಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಚಿಕ್ಕಬಳ್ಳಾಪುರದಿಂದ ಾಗಮಿಸಿದ್ದ ನೂರಾರು ಕಾಂಗ್ರೆಸ್ ಸದಸ್ಯರು ಸದಾಶಿವನಗರದ ಸುಧಾಕರ್ ರೆಡ್ಡಿ ಮನೆ ಮುಂದೆ ಬೀಡುಬಿಟ್ಟು ರಾಜೀನಾಮೆ ಕೊಡದಂತೆ ಒತ್ತಾಯಿಸಿದ್ದರು. ಈ ಮಧ್ಯೆ, ಸುಧಾಕರ್ ರೆಡ್ಡಿ ಮನೆಗೆ ತೆರಳಿದ್ದ ಸಚಿವ ರಾಮಲಿಂಗಾರೆಡ್ಡಿ, ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಮನವೊಲಿಕೆ ಪ್ರಯತ್ನ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


