'ಕೈ'ನಲ್ಲಿ ಸ್ಫೋಟಗೊಂಡ ಆಂತರಿಕ ಭಿನ್ನಮತ: ಶಾಸಕ ಸ್ಥಾನಕ್ಕೆ ಡಾ. ಸುಧಾಕರ್ ರಾಜಿನಾಮೆ
ವಿಧಾನಸಭೆ ಚುನಾವಣಾ ಹೊಸ್ತಿಲಲ್ಲೇ ರಾಜ್ಯ ಕಾಂಗ್ರೆಸ್ ನ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು. ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಪಕ್ಷಕ್ಕೆ ...

Published On :
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಹೊಸ್ತಿಲಲ್ಲೇ ರಾಜ್ಯ ಕಾಂಗ್ರೆಸ್ ನ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು. ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಪಕ್ಷಕ್ಕೆ ರಾಜಿನಾಮೆ ನೀಡುವುದಾಗಿ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.
ರಾಜ್ಯ ಕಾಂಗ್ರೆಸ್'ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ರಾಜೀನಾಮೆ ನೀಡುವುದಾಗಿ ಟ್ವಿಟರ್'ನಲ್ಲಿ ಘೋಷಿಸಿದ್ದಾರೆ. ಇಂದು ರಾಜಿನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಸುಧಾಕರ್ ತಂದೆ ಪೇರೇಸಂದ್ರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೇಶವರೆಡ್ಡಿ ಅವರನ್ನು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಿದರೇ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಚಿಕ್ಕಬಳ್ಳಾಪುರ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಸುಧಾಕರ್ ತಂದೆ ಕೇಶವರೆಡ್ಡಿ ವಿರುದ್ಧ ವೀರಪ್ಪ ಮೊಯ್ಲಿ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಶವರೆಡ್ಡಿಯನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವಂತೆ ಒತ್ತಾಯಿಸಿದ್ದಾರೆ.
ಚಿಕ್ಕಬಳ್ಳಾಪುರ ಕಾಂಗ್ರೆಸ್'ನಲ್ಲಿ ಮೊದಲಿನಿಂದಲೂ ಸುಧಾಕರ್, ವೀರಪ್ಪ ಮೋಯ್ಲಿ ನಡುವೆ ವೈಮನಸ್ಯ ಇದೆ. ಸಚಿವ ಸಂಪುಟ ವಿಸ್ತರಣೆಯಲ್ಲಿ ಒಕ್ಕಲಿಗ ಕೋಟಾದಿಂದ ಸಚಿವರಾಗಲು ಪ್ರಯತ್ನಿಸಿದ್ದ ಸುಧಾಕರ್'ಗೆ ಸಂಸದ ವೀರಪ್ಪ ಮೊಯ್ಲಿ ಅಡ್ಡಗಾಲು ಹಾಕಿದ್ದರು ಎಂದು ಹೇಳಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


