ನಿಖಿಲ್ ಬೇರೆಯಲ್ಲ, ಪ್ರಜ್ವಲ್ ಬೇರೆಯಲ್ಲ, ಇಬ್ಬರು ಒಂದೇ: ಎಚ್.ಡಿ ದೇವೇಗೌಡ
ಜೆಡಿಎಸ್ ನಲ್ಲಿ ಸೂಟ್ ಕೇಸ್ ಸಂಸ್ಕೃತಿ ಇದೆ ಎಂದು ಹೇಳಿ ಪಕ್ಷದ ಹಿರಿಯ ಮುಖಂಡರಿಗೆ ಇರಿಸುಮುರಿಸು ಉಂಟು ಮಾಡಿದ್ದ ಪ್ರಜ್ವಲ್ ರೇವಣ್ಣ ಮಾಜಿ ಮುಖ್ಯಮಂತ್ರಿ ...

Published On :
ಬೆಂಗಳೂರು: ಜೆಡಿಎಸ್ ನಲ್ಲಿ ಸೂಟ್ ಕೇಸ್ ಸಂಸ್ಕೃತಿ ಇದೆ ಎಂದು ಹೇಳಿ ಪಕ್ಷದ ಹಿರಿಯ ಮುಖಂಡರಿಗೆ ಇರಿಸುಮುರಿಸು ಉಂಟು ಮಾಡಿದ್ದ ಪ್ರಜ್ವಲ್ ರೇವಣ್ಣ ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರ ಸ್ವಾಮಿ ಅವರ ಬಳಿ ಕ್ಷಮೆ ಕೋರುವಂತೆ ಮಾಜಿ ಪ್ರಧಾನಿ ಎಚ್ .ಡಿ ದೇವೇಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಜ್ವಲ್ ನನ್ನು ಮನೆಗೆ ಕರೆಸಿ ಮಾತನಾಡಿದ್ದೇನೆ, ಆತನಿಗೆ ತನ್ನ ತಪ್ಪಿನ ಅರಿವಾಗಿದೆ, ಕುಮಾರಸ್ವಾಮಿ ಬಳಿ ಕ್ಷಮೆ ಕೋರುವಂತೆ ಹೇಳಿದ್ದೇನೆ, ಆತ ಕೂಡ ಕ್ಷಮೆ ಕೋರಿದ್ದಾನೆ, ಪಕ್ಷದ ನಿರ್ಣಯಕ್ಕೆ ಬದ್ಧ ಎಂದು ಹೇಳಿದ್ದಾನೆ, ಪ್ರಜ್ವಲ್ ಭವಿಷ್ಯ ಕುಮಾರಸ್ವಾಮಿ ಕೈಯ್ಯಲ್ಲಿದೆ ಎಂದು ದೇವೇಗೌಡ ಪರೋಕ್ಷವಾಗಿ ಹೇಳಿದ್ದಾರೆ.
ನಮ್ಮ ಪಕ್ಷದಲ್ಲಿ ಯಾವುದೇ ಸೂಟ್ ಕೇಸ್ ಸಂಸ್ಕೃತಿಯಿಲ್ಲ ಎಂದು ಹೇಳಿರುವ ದೇವೇಗೌಡ, ಪ್ರಜ್ವಲ್ ಹೇಳಿಕೆ ಸಂಬಂಧ ಕುಮಾರಸ್ವಾಮಿ ಅಸಮಾಧಾನಗೊಂಡಿದ್ದಾರೆ ಎಂಬುದು ಸುಳ್ಳು ಸುದ್ದಿ ಎಂದು ಸಮರ್ಥಿಸಿಕೊಂಡಿದ್ದಾರೆ. ನಿಖಿಲ್, ಪ್ರಜ್ವಲ್ ಇಬ್ಬರೂ ನನಗೆ ಒಂದೇ, ಇಬ್ಬರು ಮಕ್ಕಳೇ, ನಿಖಿಲ್ ಏನಾದರೂ ಈ ರೀತಿ ಹೇಳಿಕೆ ನೀಡಿದ್ದರೇ ಹೀಗೆ ಆಗುತ್ತಿರಲಿಲ್ಲವೇ ಎಂದು ಪ್ರಶ್ನಿಸಿರುವ ದೇವೇಗೌಡರು ಇದನ್ನು ಮುಂದುವರಿಸುವುದು ಬೇಡ ಇಲ್ಲಿಗೆ ಮುಕ್ತಾಯಗೊಳಿಸಿ ಎಂದು ಸಲಹೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕುಮಾರಸ್ವಾಮಿಕ್ಷಮೆಎಚ್.ಡಿ ದೇವೇಗೌಡH.D DevegowdasorryKumara SwamyPrajwal Revannaಪ್ರಜ್ವಲ್ ರೇವಣ್ಣಸೂಟ್ ಕೇಸ್ ಸಂಸ್ಕೃತಿSuit Case Culture
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


