ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧೆ: ಸಿದ್ದರಾಮಯ್ಯ
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸಲು ಇಚ್ಛಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ...

Published On :
ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದಲೇ ಸ್ಪರ್ಧಿಸಲು ಇಚ್ಛಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು ಉಪ ಚುನಾವಣೆಯಲ್ಲಿ ಈ ಕ್ಷೇತ್ರ ಮರುಜನ್ಮ ನೀಡಿದೆ. ಚಾಮುಂಡೇಶ್ವರಿ ಕ್ಷೇತ್ರದ ಜನತೆ ನನ್ನನ್ನು ಐದು ಬಾರಿ ಶಾಸಕನನ್ನಾಗಿ ಆಯ್ಕೆ ಮಾಡಿದ್ದಾರೆ. ಮುಂದೆಯೂ ಇದೇ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಲು ಉದ್ದೇಶಿಸಿದ್ದೇನೆ ಎಂದು ಹೇಳಿದ್ದಾರೆ.
ವರುಣಾ ಕ್ಷೇತ್ರಕ್ಕೆ ನನಗೆ ಹೆಚ್ಚಾಗಿ ಬರಲು ಸಾಧ್ಯವಾಗುತ್ತಿಲ್ಲ. ಹಿಂದೆ ನನ್ನ ಮಗ ರಾಕೇಶ್ ಬರುತ್ತಿದ್ದ. ಈಗ ಯತೀಂದ್ರ ಬರುತ್ತಿದ್ದಾನೆ ಎಂದು ಹೇಳಿದ್ದಾರೆ. ಯತೀಂದ್ರ ವರುಣಾಕ್ಷೇತ್ರದಿಂದ ಸ್ಪರ್ಧಿಸುವರೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಅದರ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮೈಸೂರುSiddaramaiahಸಿದ್ದರಾಮಯ್ಯMysuruChamundeshwari constituency2018 electionsಚಾಮುಂಡೇಶ್ವರಿ ಕ್ಷೇತ್ರ2018 ರ ಚುನಾವಣೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


