'ಯಡಿಯೂರಪ್ಪ ಕಚಡಾ ಮುಖ್ಯಮಂತ್ರಿಯಾಗಿದ್ರು': ಜೆಡಿಎಸ್ ಶಾಸಕ ಮಧು ಬಂಗಾರಪ್ಪ
'ಯಡಿಯೂರಪ್ಪ ಒಬ್ಬ ಕಚಡಾ ಮುಖ್ಯಮಂತ್ರಿಯಾಗಿದ್ದರು' ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ....

Published On :
ಧಾರವಾಡ: 'ಯಡಿಯೂರಪ್ಪ ಒಬ್ಬ ಕಚಡಾ ಮುಖ್ಯಮಂತ್ರಿಯಾಗಿದ್ದರು' ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಜೆಡಿಎಸ್ ಶಾಸಕ ಮಧು ಬಂಗಾರಪ್ಪ ಅವರು ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಇಂದು ನವಲಗುಂದದಲ್ಲಿ ಜೆಡಿಎಸ್ ರೈತರ ಸಮಾವೇಶದಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಯಡಿಯೂರಪ್ಪ ಅವರ ರಕ್ತ ರೈತ ವಿರೋಧಿ ರಕ್ತ. ಅವರ ರಕ್ತ ಸರಿಯಿಲ್ಲ. ಅದು ಕೆಟ್ಟ ರಕ್ತ ಎಂದು ಹರಿಹಾಯ್ಡರು.
ಯಡಿಯೂರಪ್ಪ ಅವರು ದಕ್ಷಿಣ ಕನ್ನಡಕ್ಕೆ ಬೆಂಕಿ ಹಚ್ಚುವ ಹೇಳಿಕೆ ನೀಡಿದ್ದಾರೆ. ಆದರೆ ಅವರಿಗೆ ತಾಕತಿದ್ದರೆ ರೈತರ ಎದುರು ಬಂದು ಮಾತನಾಡಲಿ. ಕಣ್ಣೀರು ಸುರಿಸಿ ಅಧಿಕಾರಕ್ಕೆ ಬಂದಿರುವ ನಿಮಗೆ ರೈತರ ಕಣ್ಣೀರು ಕಾಣಿಸುತ್ತಿಲ್ಲ. ರೈತರ ಸಾಲ ಮನ್ನಾ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂಗು ಹಿಡಿಯುವ ಬದಲು ಪ್ರಧಾನಿ ಮೋದಿ ಮೂರು ಹಿಡಿಯಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


