ಅವಧಿಗೂ ಮುನ್ನ ರಾಜ್ಯ ವಿಧಾನಸಭೆ ಚುನಾವಣೆ ಸಾಧ್ಯತೆ ಇಲ್ಲ: ಪರಮೇಶ್ವರ್
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿ ಮೇ- 2018 ಕ್ಕೆ ಕೊನೆಗೊಳ್ಳಲಿದೆ, ಆದರೆ ಅವಧಿಗೂ ಮುನ್ನ ರಾಜ್ಯ ವಿಧಾನಸಭೆ ಚುನಾವಣೆ ನಡೆಯುವ ...

Published On :
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿ ಮೇ- 2018 ಕ್ಕೆ ಕೊನೆಗೊಳ್ಳಲಿದೆ, ಆದರೆ ಅವಧಿಗೂ ಮುನ್ನ ರಾಜ್ಯ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಯಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
ಪ್ರೆಸ್‌ಕ್ಲಬ್ ಮತ್ತು ವರದಿಗಾರರ ಕೂಟ ಏರ್ಪಡಿಸಿದ್ದ ಸಂವಾದದಲ್ಲಿ ಮಾತನಾಡಿದರು. ಅವಧಿಗೂ ಮುನ್ನ ಅಂದರೆ ಡಿಸೆಂಬರ್ ನಲ್ಲೇ ವಿಧಾನಸಭೆ ಚುನಾವಣೆ ನಡೆಯಲಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದೆ ಅವರು, ಅವಧಿಗೂ ಮುನ್ನವೇ ಸಿದ್ದರಾಮಯ್ಯ ಸರ್ಕಾರ ಚುನಾವಣೆ ನಡೆಯುವುದಿಲ್ಲ, ಸರ್ಕಾರದ ಪೂರ್ಣ ಅವಧಿ ಮುಗಿದ ನಂತರವೇ ವಿಧಾನ ಸಭೆ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ.
ತಾವು ಸಿಎಂ ಹುದ್ದೆಯ ಆಕಾಂಕ್ಷಿಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ್ 2018ರ ವಿಧಾನಸಭೆ ಚುನಾವಣೆ ಜವಾಬ್ದಾರಿಯನ್ನು ನನಗೆ ನೀಡಿದ್ದಾರೆ, ಪಕ್ಷ ಗೆಲ್ಲುವದಷ್ಟೇ ನನ್ನ ಮೊದಲ ಆದ್ಯತೆ. ಸದ್ಯದ ಪರಿಸ್ಥಿತಿಯಲ್ಲಿ ನಾನು ಸಿಎಂ ಅಭ್ಯರ್ಥಿಯಲ್ಲ, ಸಿಎಂ ಯಾರು ಎಂಬುದನ್ನು ಚುನಾವೆ ನಂತರ ಕಾಂಗ್ರೆಸ್ ಶಾಸಂಕಾಂಗ ನಿರ್ಧರಿಸುತ್ತದೆ ಎಂದು ಹೇಳಿದರು.
ದಲಿತ ಮುಖ್ಯಮಂತ್ರಿ ವಿಷಯದಲ್ಲಿ ನನ್ನಿಂದ ಗೊಂದಲ ಆಗಿಲ್ಲ. ನಾನು ಅರ್ಜಿ ಹಾಕಿ ದಲಿತ ಸಮುದಾಯದಲ್ಲಿ ಹುಟ್ಟಿಲ್ಲ. ದಲಿತರಿಗೂ ಒಮ್ಮೆ ಅವಕಾಶ ಸಿಗಬೇಕು ಎಂಬುದು ಆ ಸಮುದಾಯದವರಿಗೆ ಮಾತ್ರವಲ್ಲ, ಬೇರೆಯವರಿಗೂ ಆಸೆ ಇದೆ. ಆದರೆ, ಈ ಚರ್ಚೆ ಈಗ ಅಪ್ರಸ್ತುತ’ ನನಗಿಂತ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಇದ್ದಾರೆ ಎಂದು ಹೇಳಿದ್ದಾರೆ. ಸದ್ಯ ವಿಧಾನ ಸಭೆ ಚುನಾವಣೆಯಲ್ಲಿ ಗೆಲ್ಲುವುದಷ್ಟೆ ನಮ್ಮ ಗುರಿ ಎಂದು ಹೇಳಿದ್ದಾರೆ.
ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಜೂನ್ 12 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಂಬೇಡ್ಕರ್ ಭವನದಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ರಿಲಾಂಚ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಸಂಬಂಧ ಸಿದ್ಧತೆಗಾಗಿ ಜೂನ್ 11 ರ ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ಸಭೆ ಕರೆಯಲಾಗಿದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


