ಬೆಂಗಳೂರು: ಶಾಸಕರ ಸಭೆ ಕರೆದ ರಾಹುಲ್ ಗಾಂಧಿ, ವಿಧಾನಸಭೆ ಅಧಿವೇಶನಕ್ಕೆ ರಜೆ
ಕಾಂಗ್ರೆಸ್ ಪಕ್ಷದ ಮೆಗಾ ಕಾರ್ಯಕ್ರಮ 'ನ್ಯಾಷನಲ್ ಹೆರಾಲ್ಡ್' ಪುನಾರಂಭ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು....
Published On :
ಬೆಂಗಳೂರು: ಕಾಂಗ್ರೆಸ್ ಪಕ್ಷದ ಮೆಗಾ ಕಾರ್ಯಕ್ರಮ 'ನ್ಯಾಷನಲ್ ಹೆರಾಲ್ಡ್' ಪುನಾರಂಭ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸೋಮವಾರ ದಿಢೀರ್ ಶಾಸಕರ ಸಭೆ ಕರೆದ ಹಿನ್ನೆಲೆಯಲ್ಲಿ ವಿಧಾನಸಭೆ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ.
ವರದಿಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ಕಾಂಗ್ರೆಸ್ ಶಾಸಕರು ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಮರು ಚಾಲನೆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಮಧ್ಯಾಹ್ನದ ಊಟದ ನಂತರ ರಾಹುಲ್ ಗಾಂಧಿ ಅವರು ಜ್ಞಾನಜೋತಿ ಸಭಾಂಗಣದಲ್ಲಿ 3 ಗಂಟೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾನ್ಯ ಸಭೆ ಕರೆದಿರುವ ಹಿನ್ನೆಲೆಯಲ್ಲಿ ಇಂದಿನ ಕಲಾಪವನ್ನು ರದ್ದುಗೊಳಿಸಲಾಗಿದೆ.
ಸಾಮಾನ್ಯ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ, ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಕೆ.ವಿ.ವೇಣುಗೋಪಾಲ್ ಹಾಗೂ ಶಾಸಕರು, ಸಚಿವರು ಸೇರಿದಂತೆ ಸುಮಾರು 1,400 ಸದಸ್ಯರು ಭಾಗವಹಿಸಲಿದ್ದಾರೆ.
ಕಾಂಗ್ರೆಸ್ ಪಕ್ಷದ ಮುಖವಾಣಿ ಹಾಗೂ ಸ್ಥಗಿತಗೊಂಡಿದ್ದ ಐತಿಹಾಸಿಕ ಪತ್ರಿಕೆ 'ನ್ಯಾಷನಲ್ ಹೆರಾಲ್ಡ್' ಗೆ ರಾಹುಲ್ ಗಾಂಧಿ ಅವರು ಬೆಂಗಳೂರಿನಲ್ಲಿ ಮರು ಚಾಲನೆ ನೀಡಿದ್ದು, ಈ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಹಾಗೂ ರಾಜ್ಯಪಾಲ ವಜುಭಾಯಿ ವಾಲಾ ಅವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

