ಬೆಂಗಳೂರು: ರಾಜೀವ್ ಗಾಂಧಿ ಅವರನ್ನು ನೆನಪಿಸಿದ ರಾಹುಲ್ ಭಾಷಣ
ಪಕ್ಷದ ಸಾಮಾನ್ಯ ಸಭೆಯಲ್ಲಿ ಮಾತನಾಡf, ಮೌನವಾಗಿರಬೇಡಿ ಎಂದು ಹೇಳಿದ ಹೇಳಿದ ಅವರು, ದಲಿತ ಅಧಿಕಾರಿಗಳನ್ನು ದಮನ ಮಾಡಲು ಅವರು ಪ್ರಯತ್ನ ನಡೆಸುತ್ತಿದ್ದಾರೆ ...

Published On :
ಬೆಂಗಳೂರು: ರಾಜಕೀಯ ಕಾರಣಗಳಿಂದಾಗಿ ಸ್ಥಗಿತಗೊಂಡಿದ್ದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಬೆಂಗಳೂರಿನಲ್ಲಿ ಎಐಸಿಸಿ ಉಫಾಧ್ಯಕ್ಷ ರಾಹುಲ್ ಗಾಂಧಿ ರಿಲಾಂಚ್ ಮಾಡಿದ್ದಾರೆ.
ನಿನ್ನೆ ಪತ್ರಿಕೆ ಬಿಡುಗಡೆ ಮಾಡಿದ ರಾಹುಲ್ ಗಾಂಧಿ ಕಾಂಗ್ರೆಸ್ ಮುಖಂಡರ ಜೊತೆ ಎರಡು ಸಭೆ ನಡೆಸಿದರು. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ನಾಯಕರಿಗೆ ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಪಕ್ಷದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ದಲಿತ ಅಧಿಕಾರಿಗಳನ್ನು ದಮನ ಮಾಡಲು ಅವರು ಪ್ರಯತ್ನ ನಡೆಸುತ್ತಿದ್ದಾರೆ, ನೀವು ಸುಮ್ಮನಿರಬೇಡಿ, ಮೌನವಾಗಿರಬೇಡಿ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಸಾಮಾನ್ಯ ಸಭೆಯಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣ, 1985 ರಲ್ಲಿ ಕಾಂಗ್ರೆಸ್ ಶತಮಾನೋತ್ಸವ ಸಮಾರಂಭದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮಾತುಗಳನ್ನು ನೆನಪಿಸಿಕೊಳ್ಳುವಂತೆ ಮಾಡಿತು.
ಈ ಹಿಂದೆ ವಿಧಾನಸಭೆ ಚುನಾವಣೆಗೆ ಟಿಕೆಟ್ ಗಳನ್ನ ಅಂತಿಮ ಕ್ಷಣದಲ್ಲಿ ಪ್ರಭಾವ ಬೀರಿ, ಹೆಲಿಕಾಪ್ಟರ್ ನಲ್ಲಿ ಬಂದು ಪಡೆದುಕೊಂಡು ಹೋಗುವ ಪದ್ಧತಿ ಇತ್ತು. ಆ ಸಂಸ್ಕತಿ ಈಗ ಅಂತ್ಯವಾಗಿದೆ. ಪಕ್ಷದ ಕಾರ್ಯಕರ್ತರನ್ನು ಗೌರವಿಸಿ ಅವರಿಗೆ ಸಿಗಬೇಕಾದ, ಗೌರವ ನೀಡಿ, ನಾಯಕರು ಅವರ ಹುದ್ದೆಗಳನ್ನು ಟೇಕನ್ ಫಾರ್ ಗ್ರಾಂಟೆಡ್ ರೀತಿ ವರ್ತಿಸಬಾರದು ಎಂದು ಹೇಳಿದ್ದಾರೆ.
ಪಂಜಾಬ್ ಹೊರತು ಪಡಿಸಿದರೇ ಇಡೀ ದೇಶದಲ್ಲಿ ಕಾಂಗ್ರೆಸ್ ಆಡಳಿತ ಇರುವ ರಾಜ್ಯ ಕರ್ನಾಟಕ ಆಗಿದೆ, ತುರ್ತು ಪರಿಸ್ಥಿತಿಯ ನಂತರ ಅಂದರೆ 1978 ರಲ್ಲಿ ಇಂದಿರಾ ಗಾಂಧಿ ಚಿಕ್ಕಮಗಳೂರಿನಿಂದ ಲೋಕಸಭೆ ಕ್ಷೇತ್ರಕ್ಕೆ ಸ್ಪರ್ಧಿಸಿ ಗೆದ್ದಿದ್ದರು.
2018 ಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ಹಾಗೂ 2019 ಕ್ಕೆ ಲೋಕಸಭೆ ಚುನಾವಣೆ ನಡೆಯಲಿದೆ. ರೈತರು, ಆರ್ಥಿಕವಾಗಿ ಹಿಂದುಳಿದವರ ಪರವಾಗಿ ಸಿದ್ದರಾಮಯ್ಯ ಸರ್ಕಾರ ಹಲವಾರು ಜನಪರ ಯೋಜನೆಗಳನ್ನು ಹಮ್ಮಿಕೊಂಡಿದೆ, ಅವುಗಳನ್ನು ಜಾರಿಗೊಳಿಸಿದೆ, ಇದನ್ನೇ ಮುಂದಿಟ್ಟುಕೊಂಡು ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಎಲ್ಲಾ ರೀತಿಯ ಪ್ರಯತ್ನ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


